ಪೊನ್ನAಪೇಟೆ, ಅ. ೧೯: ಸಂಸ್ಕೃತ ಭಾಷೆಯಲ್ಲಿ ೨೪ ಸಾವಿರ ಶ್ಲೋಕಗಳಿರುವ ರಾಮಾಯಣವನ್ನು ರಚಿಸುವ ಮೂಲಕ ಭಾರತದ ಮೊದಲ ಮಹಾಕಾವ್ಯವನ್ನು ರಚಿಸಿದ ಈ ದೇಶದ ಮೊದಲ ಕವಿ ಮಹರ್ಷಿ ವಾಲ್ಮೀಕಿ ಎಂದು ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಅವರು ಹೇಳಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವೀರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಸಂಯುಕ್ತ ಆಶಯದಲ್ಲಿ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಡಾ. ಜೆ. ಸೋಮಣ್ಣ ಅವರು, ರಾಮಾಯಣದ ಮೂಲಕ ವಾಲ್ಮೀಕಿ ಮಹರ್ಷಿ ಜಗತ್ತಿಗೆ ಅದ್ಭುತವಾದ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಆದರ್ಶ ಪುರುಷ ರಾಮನ ಪಿತೃವಾಕ್ಯ ಪರಿಪಾಲನೆ, ಭರತ ಮತ್ತು ಲಕ್ಷö್ಮಣರ ಸಹೋದರತ್ವ, ಸೀತೆಯ ಪತಿವ್ರತಾ ಧರ್ಮದ ಮೂಲಕ ಜಗತ್ತಿಗೆ ಅದ್ಭುತ ಸಂದೇಶವನ್ನು ಸಾರಿದ್ದಾರೆ ಎಂದರು.

ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಪಿ.ಟಿ. ಸುರೇಶ್ ಮಾತನಾಡಿ, ಪೊನ್ನಂಪೇಟೆ ತಾಲೂಕಿನಲ್ಲಿ ಮಹರ್ಷಿ ವಾಲ್ಮೀಕಿ ಭವನವನ್ನು ನಿರ್ಮಾಣ ಮಾಡಿದಲ್ಲಿ, ಬುಡಕಟ್ಟು ಜನಾಂಗದ ಕಾರ್ಯಕ್ರಮಗಳನ್ನು ನಡೆಸಲು ಸಹಾಯವಾಗುತ್ತದೆ. ಆದ್ದರಿಂದ ವಾಲ್ಮೀಕಿ ಭವನ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕು ಎಂದು ತಹಶೀಲ್ದಾರರಿಗೆ ಮನವಿ ಮಾಡಿದರು.

ತಾಲೂಕು ವಾಲ್ಮೀಕಿ ಸಂಘದ ಉಪಾಧ್ಯಕ್ಷ ಮುತ್ತುರಾಜ್ ಮಾತನಾಡಿ, ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ಜನಾಂಗದವರು ಸರ್ಕಾರದ ಅನುದಾನಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಜನಾಂಗದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಾಗಿದ್ದು, ಇಲಾಖೆಯ ಕಚೇರಿಗಳಿಗೆ ಬಂದಾಗ ಸಂಬAಧಿಸಿದ ಅಧಿಕಾರಿಗಳು ಅವರನ್ನು ಸತಾಯಿಸದೆ ಅವರ ಕೆಲಸ ಕಾರ್ಯಗಳನ್ನು ಸೂಕ್ತ ಸಮಯದಲ್ಲಿ ಮಾಡಿಕೊಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಸಿದ್ದಪ್ಪ ಮಾತನಾಡಿ, ಸರ್ಕಾರ ಗಿರಿಜನ ಆಶ್ರಮ ಶಾಲೆ ಹೆಸರನ್ನು ವಾಲ್ಮೀಕಿ ಆಶ್ರಮಶಾಲೆ ಎಂದು ಬದಲಾವಣೆ ಮಾಡಿರುವುದು ಸರಿಯಲ್ಲ. ಸರ್ಕಾರ ೧೨ ಆದಿವಾಸಿ ಜನಾಂಗಗಳನ್ನು ಅಲೆಮಾರಿ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ಗಪ್ಪು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಂಕಜ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ನಾಗರಹೊಳೆ ಅಮ್ಮಾಳಮ್ಮ ಕಲಾ ತಂಡದ ಅಧ್ಯಕ್ಷ ರಮೇಶ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್‌ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ರಾಮಾಯಣದಂತಹ ಮಹಾಕಾವ್ಯವನ್ನು ರಚಿಸುವ ಮೂಲಕ ಜಗತ್ತಿಗೆ ಆದರ್ಶ ವ್ಯಕ್ತಿಯಾಗಿರುವ ಮಹರ್ಷಿ ವಾಲ್ಮೀಕಿ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರು ಇಡೀ ಸಮಾಜಕ್ಕೆ ಸಂಬAಧಿಸಿದ ವ್ಯಕ್ತಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ಸಂದರ್ಭ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕುಮಾರ್, ತಿತಿಮತಿ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಣಿಕುಂಞ, ಉಪಾಧ್ಯಕ್ಷೆ ಪುಷ್ಪ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ರಾಮು, ದೇವರಪುರ ಗ್ರಾಮ ಪಂಚಾಯಿತಿ ಸದಸ್ಯ ರಾಣಿ, ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಚುಬ್ರು, ತಾಲೂಕು ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಪದಾಧಿಕಾರಿ ಟಿ.ಎಸ್. ಮಹೇಶ್ ಇನ್ನಿತರರು ಇದ್ದರು.

ಪೊನ್ನಂಪೇಟೆ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ನವೀನ್ ಕುಮಾರ್ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕಿ ಚೈತ್ರ ಪ್ರಾರ್ಥಿಸಿ, ತಾಲೂಕು ಪರಿಶಿಷ್ಟ ವರ್ಗಗಳ ಕಚೇರಿ ಅಧೀಕ್ಷಕ ಕೀರ್ತಿ ಸ್ವಾಗತಿಸಿ, ಶಿಕ್ಷಕ ಬಸವರಾಜು ವಂದಿಸಿದರು. ಬೊಮ್ಮಾಡು ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ನಿರೂಪಿಸಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನ ದಲ್ಲಿ ವಾಹನದಲ್ಲಿರಿಸಿದ್ದ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೆರವಣಿಗೆ ಮೂಲಕ ಕರ್ನಾಟಕ ಪಬ್ಲಿಕ್ ಶಾಲೆಗೆ ತೆರಳಲಾಯಿತು. ಮೆರವಣಿಗೆ ಯುದ್ದಕ್ಕೂ ನಾಗರಹೊಳೆ ಅಮ್ಮಾಳಮ್ಮ ಕಲಾತಂಡ ಮತ್ತು ಮಲೆಕುಡಿಯರ ಗೋಪಮ್ಮ ತಂಡದಿAದ ನಡೆದ ನೃತ್ಯ ಕಾರ್ಯಕ್ರಮ ಗಮನ ಸೆಳೆಯಿತು.