ಮಡಿಕೇರಿ, ಅ. ೧೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ೨೦೨೪ ಆಚರಿಸಲಾಯಿತು.

‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ’ ಎಂಬ ಘೋಷವಾಕ್ಯದಲ್ಲಿ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮುನಿರತ್ನಮ್ಮ ಉದ್ಘಾಟಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಆನಂದ್, ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ, ಫೀ.ಮಾ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಡಾ. ರಾಘವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮನೋವೈದ್ಯ ಡಾ. ಡೇವಿನ್ ಕರ್ಕಡ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಅಶ್ವಿನಿ (ಪ್ರಥಮ), ಆಶಿಕಾ (ದ್ವಿತೀಯ), ವರ್ಷ ಟಿ.ವಿ. (ತೃತೀಯ) ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಅಧಿಕಾರಿ ಡಾ. ಶೈಲಶ್ರೀ ಕೆ ಹಾಗೂ ಅಲೋಕ್ ಬಿಜೈ ಅವರು ಉಪಸ್ಥಿತರಿದ್ದರು.