ಶನಿವಾರಸಂತೆ, ಅ. ೨೦: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಹಾಸನದ ಅಮ್ಮ ಚಾರಿಟಬಲ್ ಟ್ರಸ್ಟ್, ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯ ದಲ್ಲಿ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಸಹಯೋಗದೊಂದಿಗೆ ಕೊಡ್ಲಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾ.೨೩ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧-೩೦ ರವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಯಶಸ್ವಿನಿ ಕಾರ್ಡ್, ಧರ್ಮಸ್ಥಳ ಸಂಘದ ಕಾರ್ಡ್ ಹಾಗೂ ಎಲ್ಲಾ ತರಹದ ಇನ್ಸೂರೆನ್ಸ್ ಇರುವವರಿಗೆ ಉಚಿತ ಸೌಲಭ್ಯವಿರುತ್ತದೆ. ಶಿಬಿರಕ್ಕೆ ಬರುವವರು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮೊಬೈಲ್ ಸಂಖ್ಯೆ ತರಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಧನಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.