ಮಡಿಕೇರಿ, ಅ. ೧೯: ನವೆಂಬರ್ ೧ ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು, ಜೊತೆಗೆ ಹೆಚ್ಚಿನ ಮಳೆ ಆಗಿರುವುದರಿಂದ ಮರಳು ಅಳವಡಿಸಿ ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಸಂಬAಧಿಸಿದAತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬAಧ ಹಾಡುಗಳನ್ನು ಒಳಗೊಂಡಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿಯನ್ನು ವೀಕ್ಷಿಸಿ ಸರಿಯಾದದ್ದನ್ನು ಆಯ್ಕೆ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು.

ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಉಪಹಾರ, ಬಹುಮಾನ, ಸ್ವಚ್ಛತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ತಾ. ೨೫ ರೊಳಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.

ವಿವಿಧ ಕ್ಷೇತ್ರದಲ್ಲಿ ರಾಜ್ಯ, ರಾಷ್ಟç ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವಂತಾಗಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲರೂ ಶ್ರಮಿಸಬೇಕು. ಕನ್ನಡಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅವರು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‌ರಾಜ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಪಥಸಂಚಲನ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಜಿಲ್ಲಾಡಳಿತದ ಜೊತೆ ಸದಾ ಕೈಜೋಡಿಸಲಿದೆ ಎಂದು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಸಂಬAಧಿಸಿದAತೆ ಎಲ್ಲಾ ರೀತಿಯ ಪೂರ್ವ ತಯಾರಿ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್. ಶೆಟ್ಟಿ, ಜಿ.ಪಂ. ಇಂಜಿನಿಯರ್ ಜಿ.ಕೆ. ನಾಯಕ್, ಡಿವೈಎಸ್‌ಪಿ ಮಹೇಶ್ ಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಡಾ. ಮಧುಸೂದನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಅನಿತಾ ಭಾಸ್ಕರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಪೌರಾಯುಕ್ತ ಹೆಚ್.ಆರ್. ರಮೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಮನ್ವಯಾಧಿಕಾರಿ ದಮಯಂತಿ ಇತರರು ಇದ್ದರು.