ಸಚಿವ ಬೈರತಿ ಸುರೇಶ್ ಮುಡಾ ಕಡತಗಳನ್ನು ಸುಟ್ಟು ಹಾಕಿದ್ದಾರೆ: ಶೋಭಾ ಕರಂದ್ಲಾಜೆ

ಬೆAಗಳೂರು, ಅ. ೧೯: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸುವ ಸಲುವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬAಧಿಸಿದ ಎಲ್ಲಾ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿದ್ದರು. ೧೯೯೭ರ ನಂತರದ ಎಲ್ಲಾ ಕಡತಗಳನ್ನು ಕಾರಿನಲ್ಲಿ ತುಂಬಿಕೊAಡು ಹೋಗಿದ್ದರು. ಆ ಕಡತಗಳು ಎಲ್ಲಿ ಹೋದವು? ನಿಮ್ಮ ರಕ್ಷಣೆಗಾಗಿ ಮುಡಾದ ಎಲ್ಲಾ ಕಡತಗಳನ್ನು ಸಚಿವ ಸುರೇಶ್ ಒಯ್ದು ಸುಟ್ಟು ಹಾಕಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಷ್ಟೇ ಅಲ್ಲದೆ ಬೈರತಿ ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೇವಲ ಸಿದ್ದರಾಮಯ್ಯನವರ ಬಾಮೈದ ಹಾಗೂ ಜಮೀನು ಮಾಲೀಕ ಹಾಗೂ ನಾಲ್ಕನೇ ಆರೋಪಿ ಜೆ. ದೇವರಾಜು ವಿರುದ್ಧ ತನಿಖೆ ನಡೆಸುವುದಷ್ಟೇ ಅಲ್ಲ, ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ತನಿಖಾ ಸಂಸ್ಥೆಗಳು ತನಿಖೆ ನಡೆಸಬೇಕು ಎಂದು ಸಚಿವೆ ಒತ್ತಾಯಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನ ಬಂಧನ

ಬೆAಗಳೂರು, ಅ. ೧೯: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ೨ ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಹಾಗೂ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್ ಅವರ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಪ್ರಲ್ಹಾದ್ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ. ಅಲ್ಲದೆ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿಯ ಅವರ ನಿವಾಸಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಗೋಪಾಲ್ ಜೋಶಿ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುನೀತ್ ಚವ್ಹಾಣ್ ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದು ಪ್ರಕರಣ ಸಂಬAಧ ಇಲ್ಲಿಯವರೆಗೂ ಮೂವರನ್ನು ಬಂಧಿಸಲಾಗಿದೆ.

ಜಿರಿಬಾಮ್ ಜಿಲ್ಲೆಯ ಹಳ್ಳಿಯ ಮೇಲೆ ಉಗ್ರರ ದಾಳಿ

ಇಂಫಾಲ್, ಅ. ೧೯: ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅತ್ಯಾಧುನಿಕ ಶಸ್ತಾçಸ್ತçಗಳನ್ನು ಬಳಸಿ, ಇಂದು ಬೆಳಗಿನ ಜಾವ ೫ ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆದೆದಿ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಿವೆ. ಹಿಂಸಾಚಾರ ಭುಗಿಲೇಳುತ್ತಿದ್ದಂತೆ ವೃದ್ಧರು, ಮಹಿಳೆಯರು ಮತ್ತು ಮಕ್ಕಳನ್ನು ಭದ್ರತಾ ಪಡೆಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ಜಿರಿಬಾಮ್ ಪಟ್ಟಣದಿಂದ ಸುಮಾರು ೩೦ ಕಿ.ಮೀ. ದೂರದಲ್ಲಿರುವ ಬೊರೊಬೆಕ್ರಾ, ದಟ್ಟವಾದ ಕಾಡುಗಳು ಮತ್ತು ಪರ್ವತಮಯ ಭೂಪ್ರದೇಶದಿಂದ ಆವೃತವಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ನಂತರ ಈ ಪ್ರದೇಶವು ಇಂತಹ ಹಲವಾರು ದಾಳಿಗಳಿಗೆ ಸಾಕ್ಷಿಯಾಗುತ್ತಿದೆ.

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸುತ್ತಿದ್ದ ಆರೋಪಿ ಬಂಧನ

ಬೆAಗಳೂರು, ಅ. ೧೯: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿAಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (೪೮) ಎಂದು ಗುರ್ತಿಸಲಾಗಿದೆ. ಅ.೪ರಂದು ಇಂಜಿನಿಯರಿAಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬAಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ತಾಂತ್ರಿಕ ತನಿಖೆಗಳು ಮತ್ತು ಇ-ಮೇಲ್‌ಗಳ ಐಪಿ ವಿಳಾಸದ ಆಧಾರದ ಮೇಲೆ ಆರೋಪಿಯನ್ನು ಡಾರ್ಜಿಲಿಂಗ್‌ನಲ್ಲಿ ಪತ್ತೆ ಹಚ್ಚಲಾಗಿದ್ದು, ಈತನ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ ೧೦ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.