ಮದ್ಯವ್ಯಸನಿ ಮಗನನ್ನು ಕೊಂದ ತಂದೆ

ಬೆAಗಳೂರು, ಅ. ೨೦: ಮದ್ಯ ಸೇವಿಸಿ ಪ್ರತಿನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದಿರುವ ಘಟನೆ ಕೆಂಗೇರಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ರಾಜೇಶ್ (೩೬) ಕೊಲೆಯಾದವರು. ಲಿಂಗಪ್ಪ ಹತ್ಯೆಗೈದ ಆರೋಪಿ. ಕ್ಯಾಬ್ ಚಾಲಕನಾಗಿದ್ದ ರಾಜೇಶ್, ನಿತ್ಯವೂ ಪಾನಮತ್ತನಾಗಿ ಬಂದು ಪೋಷಕರೊಂದಿಗೆ ಜಗಳವಾಡುತ್ತಿದ್ದ. ತಡರಾತ್ರಿ ಪಾನಮತ್ತನಾಗಿ ಬಂದಿದ್ದ ರಾಜೇಶ್, ಮನೆಯ ಗೇಟನ್ನು ಒದ್ದು, ತಂದೆಯ ಮೇಲೆ ಹಲ್ಲೆ ಮಾಡಲಾರಂಭಿಸಿದ್ದ. ಬೇಸತ್ತ ಲಿಂಗಪ್ಪ, ಪಾನಮತ್ತನಾಗಿದ್ದ ರಾಜೇಶ್‌ನ ಕೈಕಾಲು ಕಟ್ಟಿ ಮರದ ದೊಣ್ಣೆಯಿಂದ ಹೊಡೆದಿದ್ದಾರೆ. ಇದರಿಂದ ರಾಜೇಶ್ ಮೃತಪಟ್ಟಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಪತ್ನಿಯ ಬರ್ಬರ ಹತ್ಯೆ: ಪತಿ ಬಂಧನ

ಬೆAಗಳೂರು, ಅ. ೨೦: ಪತ್ನಿಯ ಶೀಲ ಶಂಕಿಸಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದ ವ್ಯಕ್ತಿಯೋರ್ವನನ್ನು ಬಾಗಲೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಸಿಂಗೇನಹಳ್ಳಿ ನಿವಾಸಿ ಶ್ರೀನಿವಾಸ್ (೫೨) ಎಂದು ಗುರುತಿಸಲಾಗಿದೆ. ಸುಧಾ (೫೦) ಹತ್ಯೆಯಾದ ಮಹಿಳೆ. ಯಲಹಂಕದ ಸಿಂಗಹಳ್ಳಿಯಲ್ಲಿ ಚಿಕನ್ ಸ್ಟಾಲ್ ನಡೆಸುತ್ತಿದ್ದ ಶ್ರೀನಿವಾಸ್, ಶೀಲ ಶಂಕಿಸಿ ಪ್ರತಿನಿತ್ಯ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಪತಿಯ ಕಿರುಕುಳ ಸಹಿಸಲಾಗದೆ ಸುಧಾ ಅವರು, ಕೆಲ ದಿನಗಳ ಹಿಂದಷ್ಟೇ ಹೊಸಕೋಟೆಯಲ್ಲಿರುವ ಸಂಬAಧಿಕರ ಮನೆಗೆ ಹೋಗಿದ್ದರು. ಆದರೆ. ಆಕೆಯ ಇಬ್ಬರು ಪುತ್ರರು ಮನವೊಲಿಸಿ ಮನೆಗೆ ಕರೆತಂದಿದ್ದರು. ಎಲ್ಲವೂ ಸರಿಯಾಗಿದೆ ಎಂದುಕೊಳ್ಳುವಷ್ಟರಲ್ಲೇ, ಶ್ರೀನಿವಾಸ್ ಮಕ್ಕಳು ಮನೆಯಲ್ಲಿಲ್ಲದ ಸಂದರ್ಭ ಪತ್ನಿಯೊಂದಿಗೆ ಜಗಳವಾಡಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಮಕ್ಕಳು ದೂರು ನೀಡಿದ್ದು, ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಹಸಿರು ಪಟಾಕಿ ಮಾರಾಟಕ್ಕಷ್ಟೇ ಅನುಮತಿ; ರಾಜ್ಯ ಸರ್ಕಾರ

ಬೆಂಗಳೂರು, ಅ. ೨೦: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಬಾರಿಯ ಹಬ್ಬಕ್ಕೆ ಹಸಿರು ಪಟಾಕಿಗಳ ಮಾರಾಟಕ್ಕಷ್ಟೇ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆಯವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದರು. ಹಬ್ಬಕ್ಕೆ ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ರಾಷ್ಟಿçÃಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ ೧೨೫ ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ಹೀಗಾಗಿ ರಾತ್ರಿ ೮ ರಿಂದ ೧೦ ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಆಟೋ-ಬಸ್ ನಡುವೆ ಅಪಘಾತ; ೧೨ ಮಂದಿ ಸಾವು

ಜೈಪುರ, ಅ. ೨೦: ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ೮ ಮಕ್ಕಳು ಸೇರಿದಂತೆ ಒಟ್ಟು ೧೨ ಮಂದಿ ಸಾವನ್ನಪ್ಪಿದ್ದಾರೆ. ಕರೌಲಿ-ಧೋಲ್ಪುರ್ ಹೆದ್ದಾರಿ ಎನ್‌ಹೆಚ್-೧೧ಬಿಯ ಸುನಿಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮೃತರಲ್ಲಿ ೮ ಮಕ್ಕಳಿದ್ದಾರೆ, ಅವರಲ್ಲಿ ಐವರು ಗಂಡು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಮಾಹಿತಿ ಪ್ರಕಾರ ಆಟೋ ಸವಾರ ಬರಿ ನಗರದ ಗುಮತ್ ಮೊಹಲ್ಲಾ ನಿವಾಸಿ. ಬರೌಲಿ ಗ್ರಾಮದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ದೆಹಲಿ ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಫೋಟ

ನವದೆಹಲಿ, ಅ. ೨೦: ದೆಹಲಿಯ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಶಾಲೆಯ ಗೋಡೆಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ವೈಟ್ ಪೌಡರ್ ಪತ್ತೆಯಾಗಿದ್ದು, ಇದು ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ದಟ್ಟ ಹೊಗೆ ಆವರಿಸಿತ್ತು. ಸ್ಫೋಟದ ತೀವ್ರತೆಗೆ ಸಮೀಪದ ಅಂಗಡಿಯ ಗಾಜುಗಳು ಹಾಗೂ ಅಂಗಡಿ ಬಳಿ ನಿಲ್ಲಿಸಿದ್ದ ಕಾರಿನ ಗಾಜುಗಳು ಹಾನಿಗೊಳಗಾಗಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಡಿಸಿಪಿ (ರೋಹಿಣಿ) ಅಮಿತ್ ಗೋಯೆಲ್ ಅವರು ತಿಳಿಸಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ : ಬಂಧನ

ಬೆAಗಳೂರು, ಅ. ೨೦: ಸಾಲದ ಬಡ್ಡಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು ೧೭ ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್ (೩೯ ವರ್ಷ) ಎಂಬಾತನನ್ನು ಬಂಧಿಸಲಾಗಿದೆ. ಮೂಲಗಳ ಪ್ರಕಾರ ಸಂತ್ರಸ್ತ ಯುವತಿಯ ತಂದೆ ಆರೋಪಿ ರವಿ ಕುಮಾರ್ ಬಳಿ ರೂ. ೭೦ ಸಾವಿರ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ಥೆಯ ತಂದೆಯೊAದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ. ಬಳಿಕ ಅವರು ರೂ. ೩೦ ಸಾವಿರ ಸಾಲ ತೀರಿಸಿದ್ದರು. ಇನ್ನುಳಿದ ರೂ. ೪೦ ಸಾವಿರ ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ. ಈ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದ.