ಕೂಡಿಗೆ, ಅ. ೨೦: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿಯ ೨೦೨೪-೨೫ ನೇ ಸಾಲಿನ ಗ್ರಾಮ ಸಭೆಯು ತಾ. ೨೫. ರಂದು ಅಧ್ಯಕ್ಷೆ ಜಿ.ಟಿ. ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಅರಶಿನಗುಪ್ಪೆ ಗ್ರಾಮದ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ಶ್ಯಾಮ್ ತಿಳಿಸಿದರು.

ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹ ತಾಲೂಕು ನಿರ್ದೇಶಕ ಕಾಳನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.