ಮಡಿಕೇರಿ, ಅ. ೨೧: ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ ೨೦೨೫ ರ ಜನವರಿ ಯಿಂದ ಡಿಸೆಂಬರ್ ೩೧ ರ ವರೆಗೆ (೧೨ ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್, ೦೪ ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.