ಮಡಿಕೇರಿ, ಅ. ೨೧: ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ ೨೦೨೫ ರ ಜನವರಿ ಯಿಂದ ಡಿಸೆಂಬರ್ ೩೧ ರ ವರೆಗೆ (೧೨ ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್ ೪ ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.