ವೀರಾಜಪೇಟೆ, ಅ. ೨೧: ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು.

ಕಾಲೇಜಿನಲ್ಲಿ ಜರುಗಿದ ಹಳೆಯ ವಿದ್ಯಾರ್ಥಿ ಸಂಘದ ಸಮ್ಮಿಲನ ಕಾರ್ಯಕ್ರಮ ೨೦೨೪ಅನ್ನು ಉದ್ಘಾಟಿಸಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಲು ಹಳೆಯ ವಿದ್ಯಾರ್ಥಿ ಸಂಘವು ಅಗತ್ಯವಾಗಿದೆ. ಹಳೆಯ ವಿದ್ಯಾರ್ಥಿ ಸಂಘದಿAದ ವಿದ್ಯಾ ಸಂಸ್ಥೆಯ ಬೆಳವಣಿಗೆಗೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದ್ದು ಇಲ್ಲಿ ಓದಿ ಹೋದ ವಿದ್ಯಾರ್ಥಿಗಳು ಸಂಘದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಅವಕಾಶವನ್ನು ಮುಕ್ತವಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಸಂತ ಅನ್ನಮ್ಮ ದೇವಾಲಯದ ಪ್ರಧಾನ ಧರ್ಮಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಮಾತನಾಡಿ ಹಳೆಯ ವಿದ್ಯಾರ್ಥಿ ಸಂಘವು ಕಾಲೇಜು ವ್ಯಾಸಂಗ ದಿನಗಳ ಹಳೆಯ ನೆನಪುಗಳನ್ನು ಮೆಲುಕು ಹಾಕಲು ಇರುವ ಒಂದು ವೇದಿಕೆಯಾಗಿದೆ. ವಿದ್ಯಾರ್ಥಿಗಳು ಸದಾ ತಾವು ಕಲಿತ ವಿದ್ಯಾಸಂಸ್ಥೆಗೆ ಕೃತಜ್ಞರಾಗಿರಬೇಕು. ಜೊತೆಗೆ ಸಂತೋಷದ ಕ್ಷಣಗಳನ್ನು ಕಳೆಯಬೇಕು ಎಂದು ಹೇಳಿದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೃಪ್ತಿ ಬೋಪಣ್ಣ ಮಾತನಾಡಿ ಹಳೆಯ ವಿದ್ಯಾರ್ಥಿಗಳು ಸಂಸ್ಥೆಯ ಬೆಳವಣಿಗೆಗೆ ಸಹಕಾರವನ್ನು ನೀಡಬೇಕು. ಹಳೆಯ ವಿದ್ಯಾರ್ಥಿ ಸಂಘವನ್ನು ನೋಂದಾಯಿಸಲಾಗಿದ್ದು ಹಳೆಯ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ, ಹಣಕಾಸಿನ ನಿರ್ವಹಣೆ ಹಾಗೂ ಕಾಲೇಜು ಒದಗಿಸಿದ ಅವಕಾಶವನ್ನು ಸದ್ಬಳಕೆ ಮಾಡಬೇಕೆಂದರು. ಕೆಲವೇ ತಿಂಗಳುಗಳಲ್ಲಿ ನ್ಯಾಕ್ ಸಮಿತಿಯವರು ಕಾಲೇಜಿಗೆ ಭೇಟಿ ನೀಡುತ್ತಿದ್ದು ಆ ನಿಟ್ಟಿನಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಳೆಯ ವಿದ್ಯಾರ್ಥಿಗಳಿಗೆ ಮನೋರಂಜನಾ ಆಟಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಉಪನ್ಯಾಸಕ ಜೋಯ್ಸನ್ ಲೋಬೋ ಸಮಗ್ರ ವರದಿ ಸಭೆಯಲ್ಲಿ ಮಂಡಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಚಾಲಕಿ ಹೇಮ, ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ನಿಕೇತ ಜೋಯ್ಸ್, ಖಜಾಂಚಿ ಹಾಗೂ ಉಪನ್ಯಾಸಕಿ ಸುನೀತಾ, ಉಪನ್ಯಾಸಕಿ ನಮೃತಾ, ಉಪನ್ಯಾಸಕಿ ದೃಶ್ಯ, ಉಪನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.