ಮಡಿಕೇರಿ, ಅ. ೨೧: ದೇಶದ ಆಂತರಿಕ ಭದ್ರತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ತರವಾಗಿದ್ದು, ಕರ್ತವ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿ ಹುತಾತ್ಮರಾದ ಪೊಲೀಸರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮ ದಿನಾಚರಣೆ ಸಂದರ್ಭ ಪೊಲೀಸ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಆಂತರಿಕ ಭದ್ರತೆ, ಸಮಾಜಘಾತುಕ ಶಕ್ತಿಯ ನಿಗ್ರಹ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿ ಕರ್ತವ್ಯಕ್ಕೆ ಬರುವ ಪೊಲೀಸರು ದೇಶದ ಉಳಿವು, ಭದ್ರತೆಗಾಗಿ ತಮ್ಮ ಪ್ರಾಣವನ್ನು ತೆತ್ತಿದ್ದಾರೆ. ಪೊಲೀಸರು ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯುತ್ತಿರುವ ಕಾರಣದಿಂದಾಗಿ ಸಮಾಜ ಸ್ವಾಸ್ಥö್ಯದಿಂದಿದೆ. ಅವರ ತ್ಯಾಗವನ್ನು ಎಂದಿಗೂ ಮರೆಯಬಾರದು. ಹುತಾತ್ಮರಾದ ಪೊಲೀಸ್ ಕುಟುಂಬಕ್ಕೆ ಸಹಾಯವಾಗಬೇಕು ಎಂದರು.

(ಮೊದಲ ಪುಟದಿಂದ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಪ್ರತಿವರ್ಷ ಅ. ೨೧ ರಂದು ಪೊಲೀಸ್ ಹುತಾತ್ಮ ದಿನಾಚರಣೆ ಆಚರಿಸ ಲಾಗುತ್ತದೆ. ಆಂತರಿಕ ಭದ್ರತೆ ಕಾಯ್ದುಕೊಳ್ಳುವುದರೊಂದಿಗೆ ಸಮಾಜ ಘಾತುಕ ಶಕ್ತಿ ನಿರ್ಮೂಲನೆಯಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದು, ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಿದೆ. ದೇಶದಲ್ಲಿ ಈ ವರ್ಷ ಕರ್ತವ್ಯ ಸಂದರ್ಭ ೨೧೬ ಮಂದಿ ಪ್ರಾಣತೆತ್ತು ಭರತ ಭೂಮಿ ಯನ್ನು ಕಾಪಾಡಿದ್ದಾರೆ ಎಂದು ಸ್ಮರಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ವೀರಾಜಪೇಟೆ ಡಿವೈಎಸ್‌ಪಿ ಮೋಹನ್ ಕುಮಾರ್, ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ, ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಸಶಸ್ತç ದಳ ನಿರೀಕ್ಷಕ ಚನ್ನನಾಯಕ, ವೈರ್‌ಲೆಸ್ ವಿಭಾಗದ ಸಿಐ ಅನಂತ್, ಮಹಿಳಾ ಠಾಣೆ ಪಿಎಸ್‌ಐ ಅಚ್ಚಮ್ಮ, ನಿವೃತ್ತ ಡಿವೈಎಸ್‌ಪಿ ಬಿ.ಎಂ. ಕುಶಾಲಪ್ಪ, ವೃತ್ತ ನಿರೀಕ್ಷಕ ಐ.ಪಿ. ಮೇದಪ್ಪ, ಪೊಲೀಸ್ ಬ್ಯಾಂಡ್ ಮಾಸ್ಟರ್ ಸಿದ್ದೇಶ್, ವಕೀಲರ ಸಂಘದ ಅಧ್ಯಕ್ಷ ನಿರಂಜನ್, ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವAಡ ಮುತ್ತಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ, ಲಯನ್ಸ್ ಮತ್ತು ಚೇಂಬರ್ ಆಫ್ ಕಾಮರ್ಸ್ ಪ್ರಮುಖ ಅಂಬೆಕಲ್ಲು ನವೀನ್ ಕುಶಾಲಪ್ಪ, ವಾರ್ತಾ ಇಲಾಖೆ ಅಧಿಕಾರಿ ಚಿನ್ನಸ್ವಾಮಿ, ಸೇರಿದಂತೆ ಇನ್ನಿತರರು ಹುತಾತ್ಮ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು. ಪೊಲೀಸರು ವಾಲಿಫೈರಿಂಗ್ ಮೂಲಕ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿದರು. ಪೊಲೀಸ್ ಧ್ವಜವನ್ನು ಅರ್ಧಕ್ಕಿಳಿಸಿ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಕೆಯೊಂದಿಗೆ ಮೌನಾ ಚರಣೆ ಮೂಲಕ ಸ್ಮರಣೆ ಮಾಡಲಾಯಿತು.