ಮಡಿಕೇರಿ, ಅ. ೨೧: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆಯಿಂದ ಅವರು ೯ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ೨೨ ರಿಂದ ೪೫ ವಯಸ್ಸಿನ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದ ಪಾತ್ರ ಕಾರ್ಯಕ್ರಮವು ಮೂರ್ನಾಡು ಸಮುದಾಯ ಭವನದಲ್ಲಿ ನಡೆಯಿತು.

ವೈದ್ಯರಾದ ಸರಸ್ವತಿ ಎಚ್.ಆರ್, ಬೃಂದಾ ಎಸ್,ಎನ್ ಅವರು ಗರ್ಭಿಣಿಯರಲ್ಲಿನ ಸಮಸ್ಯೆಗಳು, ರಕ್ತಹೀನತೆ, ರಕ್ತದೊತ್ತಡ, ಮಧುಮೇಹ, ಗ್ಯಾಸ್ಟಿçಕ್, ಸಂತಾನೋತ್ಪತ್ತಿ ಸಮಸ್ಯೆಗಳು, ಥೈರಾಯ್ಡ್, ಆಯುರ್ವೇದ ಪಂಚಕರ್ಮ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಮನೆ ಮದ್ದಿನ ಬಗ್ಗೆ ಗಿಡಮೂಲಿಕೆಗಳ ಬಗ್ಗೆ ಅರಿವು ಮೂಡಿಸಿದರು.

ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಕೀರ್ತನ್ ಮಾತನಾಡಿ, ಆಯುರ್ವೇದದ ಸದುಪಯೋಗವನ್ನು ಪಡೆದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಹಿಳೆಯರಿಗೆ ಆಯುಷ್ ಆರೋಗ್ಯ ಕೈಪಿಡಿ ಬಿಡುಗಡೆ ಮಾಡಲಾಯಿತು.