ಪೊನ್ನಂಪೇಟೆ, ಅ. ೨೧: ಇತ್ತೀಚೆಗೆ ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹುದಿಕೇರಿ ಜನತಾ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅರ್ವತೊಕ್ಕಲು ಸರ್ವದೈವತಾ ಪ್ರೌಢಶಾಲೆ ಉತ್ತಮ ಸಾಧನೆ ತೋರುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಬಾಲಕರ ಥ್ರೋಬಾಲ್‌ನಲ್ಲಿ ಪ್ರಥಮ, ಟೇಬಲ್ ಟೆನ್ನಿಸ್ ಮತ್ತು ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ, ಬಾಲಕಿಯರ ಥ್ರೋಬಾಲ್‌ನಲ್ಲಿ ಪ್ರಥಮ, ಟೇಬಲ್ ಟೆನ್ನಿಸ್ ಮತ್ತು ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಚೆಸ್ ವಿಭಾಗದಲ್ಲಿ ಯದುನಂದನ್ ಪ್ರಥಮ ಸ್ಥಾನ ಪಡೆದು ವಿಭಾಗ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸರ್ವದೈವತಾ ಪ್ರೌಢಶಾಲೆ ಒಟ್ಟು ೪೦ ಅಂಕ ಪಡೆದುಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತಿಳಿಸಿದ್ದಾರೆ.