ಮಡಿಕೇರಿ ಅ.೨೫: ಕೊಡಗು ಜಿಲ್ಲೆಯಲ್ಲಿ ಮುಂಗಾರು ಅವಧಿ ಮುಗಿದಿದ್ದು, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸಾಧಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಪ್ರಗತಿ ಸಂಬAಧ ಮಾಹಿತಿ ಪಡೆದು ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಬಸವ, ಅಂಬೇಡ್ಕರ್, ಪಿಎಂಜಿಎಸ್‌ವೈ, ಮತ್ತಿತರ ವಸತಿ ಯೋಜನೆಯಡಿ ೨೦೧೦-೧೧ ರಿಂದ ಮನೆ ನಿರ್ಮಾಣಕ್ಕೆ ಬಾಕಿ ಇದ್ದು, ಸಾಧ್ಯವಾದಷ್ಟು ಪ್ರಗತಿ ಸಾಧಿಸುವತ್ತ ಗಮನಿಸಬೇಕು.
ವಿವಿಧ ವಸತಿ ಯೋಜನೆಯಡಿ ಪರಿಶಿಷ್ಟರಿಗೆ ೨ ಲಕ್ಷ ರೂ., ಸಾಮಾನ್ಯರಿಗೆ ೧.೨೦ ಲಕ್ಷ ರೂ., ಇದ್ದು, ವಸತಿ ಯೋಜನೆ ಪ್ರಗತಿ ಸಾಧಿಸಲು ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ವಸತಿ ಯೋಜನೆ ಪ್ರಗತಿ ಸಾಧಿಸುವಲ್ಲಿ ತಾ.ಪಂ. ಇಒಗಳು ಮತ್ತು ಪಿಡಿಒಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಆ ನಿಟ್ಟಿನಲ್ಲಿ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
ತಾ.ಪಂ.ಇಒ ಶೇಖರ್ ಅವರು ಪರಿಶಿಷ್ಟ ಪಂಗಡ ಯೋಜನೆಯಡಿ ವಿಶೇಷವಾಗಿ ೪.೫೦ ಲಕ್ಷ ರೂ. ಘಟಕ ವೆಚ್ಚವಿದೆ. ಆದ್ದರಿಂದ ಕನಿಷ್ಟ ೫ ಲಕ್ಷ ರೂ.ವರೆಗೆ ಹೆಚ್ಚಿಸಿದರೆ ಮನೆಗಳ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು. ವಸತಿ ಯೋಜನೆ ಸಂಬAಧಿಸಿದAತೆ ಮಾಹಿತಿ ನೀಡಿದ ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಅವರು ಬಸವ ವಸತಿ ಯೋಜನೆಯಡಿ ೨೦೧೦-೧೧ ರಿಂದ ೨೦೨೧-೨೨ ರವರೆಗೆ ೨೨,೫೨೨ ಮನೆ ನಿರ್ಮಿಸುವ ಗುರಿಯಲ್ಲಿ ೧೮,೭೫೧ ಮನೆಗಳಿಗೆ ಮಂಜೂರಾಗಿದ್ದು, ಇದರಲ್ಲಿ ೧೨,೬೩೩ ಮನೆಗಳ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಅಂಬೇಡ್ಕರ್ ವಸತಿ ಯೋಜನೆಯಡಿ ೨೦೧೫-೧೬ ರಿಂದ ೨೦೨೧-೨೨ ರವರೆಗೆ ೫,೯೬೦ ಗುರಿಯಲ್ಲಿ ೨,೨೫೨ ಮನೆಗಳಿಗೆ ಮಂಜೂರಾಗಿದ್ದು, ೧,೭೯೯ ಮನೆಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ೨೦೧೬-೧೭ ರಿಂದ ೨೦೨೪-೨೫ ರವರೆಗೆ ೧೨೩ ಮನೆಗಳ ಗುರಿ ಇದ್ದು, ೧೨೩ ಮನೆಗಳಲ್ಲಿ ೧೧೬ ಮನೆ ನಿರ್ಮಾಣಕ್ಕೆ ಮಂಜೂ ರಾತಿ ದೊರೆತಿದ್ದು, ೫೧ ಮನೆಗಳು ಪೂರ್ಣಗೊಂಡಿವೆ. ಒಟ್ಟಾರೆ ಜಿಲ್ಲೆ ಯಲ್ಲಿ ೨೯,೯೯೯ ಗುರಿಯಲ್ಲಿ ೨೨,೦೯೮ ಮನೆಗಳಿಗೆ ಮಂಜೂರಾತಿ ದೊರೆತಿದ್ದು, ಇದರಲ್ಲಿ ೧೫,೩೪೧ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
(ಮೊದಲ ಪುಟದಿಂದ) ಮಳೆಗಾಲ ಮುಗಿದಿರುವುದರಿಂದ ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಪಿಎಂಜಿಎಸ್‌ವೈ, ಹೀಗೆ ವಿವಿಧ ಎಂಜಿನಿಯರಿAಗ್ ಇಲಾಖೆಗಳು ರಸ್ತೆ, ಕಟ್ಟಡ ಕಾಮಗಾರಿ ಪ್ರಗತಿ ಸಾಧಿಸುವಂತೆ ಡಾ.ಎನ್.ವಿ.ಪ್ರಸಾದ್ ತಾಕೀತು ಮಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಕಾರ್ಯಕ್ರಮಗಳನ್ನು ಕೃಷಿಕರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ, ಬೆಳೆ ಹಾನಿ ಮತ್ತಿತರ ಸಂಬAಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನಾ ಕಾರ್ಯಕ್ರಮಗಳನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಿ.ಪಂ.ವ್ಯಾಪ್ತಿಯ ರಸ್ತೆ, ಕುಡಿಯುವ ನೀರು ಮತ್ತಿತರ ಕಾಮಗಾರಿಯ ಪ್ರಗತಿ ಸಾಧಿಸಲಾಗುತ್ತಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದು ವಿವರಿಸಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಪಂಚಾಯತ್ ರಾಜ್ ಇಂಜಿನಿಯರ್ ನಾಯಕ್, ಸುರೇಶ್ ಕುಮಾರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಸನ್ನ, ತಹಶೀಲ್ದಾರರು, ತಾ.ಪಂ.ಇಒಗಳು ಇತರರು ತಮ್ಮ ಇಲಾಖೆಗೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.