ಸೋಮವಾರಪೇಟೆ, ಅ. ೨೫: ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಗೆ ಸಂಬAಧಿಸಿದAತೆ ಸೋಮವಾರಪೇಟೆ ತಾಲೂಕಿನ ಅಂತಿಮ ಅಭ್ಯರ್ಥಿಗಳ ಪಟ್ಟಿ ಕ್ರಮಬದ್ಧವಾಗಿಲ್ಲ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಪ್ರಸಕ್ತ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಹೆಚ್.ಎನ್. ಮಂಜುನಾಥ್ ಆರೋಪಿಸಿದ್ದಾರೆ.

ಈ ಕುರಿತು ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸರಕಾರಿ ನೌಕರರ ಸಂಘದ ಚುನಾವಣೆಗೆ ಸಂಬAಧಿಸಿದAತೆ ಈಗಾಗಲೇ ನಾಮಪತ್ರ ಸಲ್ಲಿಕೆ, ಹಿಂಪಡೆಯುವುದು, ನಾಮಪತ್ರ ಪರಿಶೀಲನೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದಿದ್ದು, ಅಕ್ಟೋಬರ್ ೨೧ ರಂದು ಸಂಜೆ ೫ ಗಂಟೆಗೆ ಚುನಾವಣಾ ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ತಾನು ಎರಡು ನಾಮಪತ್ರ ಸಲ್ಲಿಸಿ ಪ್ರತ್ಯೇಕವಾಗಿ ನಾಮಪತ್ರ ಠೇವಣಿ ಹಣವನ್ನು ಪಾವತಿಸಿದ್ದು, ಅಂತಿಮ ದಿನದಂದು ನಾಮಪತ್ರ ಕ್ರಮಬದ್ಧವಾಗಿದ್ದ ಹಿನ್ನೆಲೆ ಒಂದು ನಾಮಪತ್ರ ಹಿಂಪಡೆದಿದ್ದು, ಮತ್ತೊಂದು ನಾಮಪತ್ರ ಸಲ್ಲಿಕೆಯಾಗಿತ್ತು. ಆದರೆ ಅಂತಿಮ ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲ. ಇದರ ಬಗ್ಗೆ ಚುನಾವಣಾಧಿಕಾರಿಗಳಿಂದ ಮಾಹಿತಿ ಪಡೆಯಲು ಎಷ್ಟೇ ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಚುನಾವಣಾಧಿಕಾರಿಗಳು ಸ್ವಜನ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸೋಮವಾರಪೇಟೆ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಗೋಷ್ಠಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜು, ನೌಕರರ ಸಂಘದ ಹಾಲಿ ನಿರ್ದೇಶಕ ಎಸ್.ಎಂ. ಸುರೇಶ್ ಇದ್ದರು.