ಪೊನ್ನಂಪೇಟೆ, ಅ. ೨೫: ಪೊನ್ನಂಪೇಟೆ ಸ್ನೇಹಿತರ ಬಳಗದ ವತಿಯಿಂದ ನವೆಂಬರ್ ೧ ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದೆಂದು ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ. ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸ್ನೇಹಿತರ ಬಳಗದ ಕಾರ್ಯದರ್ಶಿ ಮಹೇಶ್ ಅವರು ಸ್ನೇಹಿತರ ಬಳಗದಲ್ಲಿ ಸುಮಾರು ೨೦ ಮಂದಿ ಸದಸ್ಯರಿದ್ದು, ಕಳೆದ ಆರು ವರ್ಷದಿಂದ ಕಾರ್ಯಾಚರಿಸುತ್ತಿದೆ.

ಸಂಘದ ವತಿಯಿಂದ ನವೆಂಬರ್ ೧ ರಂದು ಪೊನ್ನಂಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸುವಂತೆ ತೀರ್ಮಾನಿಸಲಾಗಿದೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ಧ್ವಜಾರೋಹಣದ ಬಳಿಕ ಬಸವೇಶ್ವರ ದೇವಾಲಯದ ಬಳಿಯಿಂದ ಭುವನೇಶ್ವರಿಯ ಭಾವಚಿತ್ರದೊಂದಿಗೆ ಡೊಳ್ಳು ಕುಣಿತ, ವೀರಗಾಸೆ ಕಲಾತಂಡಗಳೊAದಿಗೆ ಪಟ್ಟಣದ ಮುಖ್ಯಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಬಳಿಕ ಬಸ್ ನಿಲ್ದಾಣದಲ್ಲಿ ಸುಮಾರು ೮೦೦ ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸ್ನೇಹಿತರ ಬಳಗದ ಅಧ್ಯಕ್ಷ ಪಿ.ಟಿ. ಸುರೇಶ್ ಅವರು ಮಾತನಾಡಿ, ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸರ್ವರು ಸಹಕರಿಸುವಂತೆ ಮನವಿ ಮಾಡಿದರು.

ಗೌರವ ಕಾನೂನು ಸಲಹೆಗಾರರಾದ ವಿ.ಜಿ. ಮಂಜುನಾಥ್ ಅವರು ಮಾತನಾಡಿ, ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದ್ದು, ಹಾಗೆಯೇ ನವೆಂಬರ್ ತಿಂಗಳಿನಲ್ಲಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಹಲವು ಸಂಘ-ಸAಸ್ಥೆಗಳ ಸಹಕಾರದೊಂದಿಗೆ ಆಚರಿಸಲು ತೀರ್ಮಾನಿಸಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗೌರವ ಅಧ್ಯಕ್ಷ ಟಿ.ವಿ. ಸುರೇಶ್, ಖಜಾಂಚಿ ದಿನೇಶ್ ಉಪಸ್ಥಿತರಿದ್ದರು.