ಮಡಿಕೇರಿ: ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನಕ್ಕೆ ಮಡಿಕೇರಿಯ ಕನ್ನಂಡ ಬಾಣೆ ರವಿ ಅಂಗಡಿ ಬಳಿ ಮಾಜಿ ಶಾಸಕ ಕೆ. ಜಿ. ಬೋಪಯ್ಯ ಚಾಲನೆ ನೀಡಿದರು.
ಈ ಸಂದರ್ಭ ನಗರ ಸಭಾ ಸದಸ್ಯರುಗಳಾದ ಸತೀಶ್ ಎಸ್.ಸಿ, ಕೆ.ಎಸ್. ರಮೇಶ್, ಬಿಜೆಪಿ ಕಾರ್ಯದರ್ಶಿ ಕನ್ನಿಕೆ, ಮಂಜುನಾಥ್, ಅಭಿಲಾಶ್ ಇತರರು ಇದ್ದರು.ಚೆಟ್ಟಳ್ಳಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ನಡೆಯಿತು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಬೂತ್ ಮಟ್ಟದಲ್ಲಿ ಸದಸ್ಯರ ಸಂಖ್ಯೆ ಹೆಚ್ಚಾಗಬೇಕು. ಆದರಿಂದ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡಬೇಕೆಂದರು. ತಾ. ೩೦ ರೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತ ವಿರೂಪಾಕ್ಷ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ತಾಲೂಕು ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ, ಪಕ್ಷದ ಜಿಲ್ಲಾ ಹಾಗೂ ತಾಲೂಕು ಪ್ರಮುಖರು, ವಾರ್ಡ್ ಅಧ್ಯಕ್ಷರು ಹಾಜರಿದ್ದರು.ಐಗೂರು: ಐಗೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕಿರುಗಂದೂರು ಮತ್ತು ಐಗೂರು ವ್ಯಾಪ್ತಿಯ ಬಿಜೆಪಿ ಸದಸ್ಯತ್ವ ಆಂದೋಲನದ ಸಭೆ ನಡೆಯಿತು.
ಸಭೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪಕ್ಷದ ಕಾರ್ಯಕರ್ತರು ಶಕ್ತಿ ಕೇಂದ್ರಗಳ ಅಧ್ಯಕ್ಷರ ಜೊತೆಗೂಡಿ ಮನೆ ಮನೆಗೆ ತೆರಳಿ ಸದಸ್ಯತ್ವದ ಸಂಖ್ಯೆಯನ್ನು ಹೆಚ್ಚಿಸಬೇಕೆಂದರು. ಸಭೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಾದಪ್ಪ, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಕಾರ್ಯದರ್ಶಿ ದರ್ಶನ್ ಜೋಯಪ್ಪ, ಮಾಜಿ ಉಪಾಧ್ಯಕ್ಷ ಪ್ರಭಾಕರ, ರೈತ ಮೋರ್ಚಾದ ಮಚ್ಚಂಡ ಪ್ರಕಾಶ್, ಯಡವನಾಡು ರಮೇಶ್, ಗ್ರಾ.ಪಂ. ಅಧ್ಯಕ್ಷ ವಿನೋದ್, ಐಗೂರು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ವಿಜಯಕುಮಾರ್, ಕಿರುಗಂದೂರು ಶಕ್ತಿ ಕೇಂದ್ರದ ಅಧ್ಯಕ್ಷ ಸುಧೀರ್, ತಾ.ಪಂ. ಮಾಜಿ ಅಧ್ಯಕ್ಷ ಡಿ.ಎಸ್. ಪೊನ್ನಪ್ಪ ಮತ್ತು ಐಗೂರು ಕಿರಗಂದೂರು ಭಾಗದ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.