ಮಡಿಕೇರಿ, ಅ. ೨೫: ಸಾರ್ವಜನಿಕ ಹಿತರಕ್ಷಣಾ ಸಮಿತಿಯ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ತಾ. ೨೮ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಪೊನ್ನಂಪೇಟೆ ತ್ಯಾಗರಾಜ ರಸ್ತೆಯಲ್ಲಿರುವ ಇಗ್ಗುತಪ್ಪ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಅಜ್ಜಮಾಡ ಎಸ್. ಕಟ್ಟಿ ಮಂದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.