ಮಡಿಕೇರಿ, ಅ. ೨೬: ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಲವು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವಿವಿಧೆಡೆಗಳಿಗೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಾರ್ಯಾಲಯದಿಂದ ತಾ.೨೫ರಂದು ಆದೇಶ ಪ್ರಕಟವಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನೂಪ್ ಮಾದಪ್ಪ ಪಿ. ಅವರನ್ನು ವೀರಾಜಪೇಟೆ ವೃತ್ತ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ. ವೀರಾಜಪೇಟೆ ವೃತ್ತ ನಿರೀಕ್ಷಕರಾಗಿದ್ದ ಶಿವರುದ್ರ ಬಿ.ಎಸ್. ಅವರನ್ನು ಕುಟ್ಟ ವೃತ್ತಕ್ಕೆ ಹಾಗೂ ಕುಟ್ಟ ವೃತ್ತ ನಿರೀಕ್ಷಕರಾಗಿದ್ದ ಸಿ.ಎ. ಮಂಜಪ್ಪ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.