ಮಡಿಕೇರಿ, ಅ. ೨೬: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕುಶಾಲನಗರ ತಾಲೂಕಿನ ೧೨೨ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ಮತ್ತು ಕುಶಾಲನಗರ ಕೈಗಾರಿಕಾ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬ್ಯಾಂಕ್‌ನ ಕಚೇರಿಗೆ ಭೇಟಿ ನೀಡಿ ಆಡಳಿತ ಮಂಡಳಿಗಳೊAದಿಗೆ ಬ್ಯಾಂಕ್ ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆದರು.

ಎರಡು ಸಹಕಾರಿ ಬ್ಯಾಂಕ್‌ಗಳ ಅಧ್ಯಕ್ಷ ಶರವಣ ಕುಮಾರ್ ಅವರು ತಮ್ಮ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮ್ಮುಖದಲ್ಲಿ ಶಾಸಕರಿಗೆ ಸಹಕಾರ ಬ್ಯಾಂಕ್‌ನ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿ ತಮ್ಮ ಸಂಸ್ಥೆಗಳ ಪರವಾಗಿ ಅಹವಾಲುಗಳನ್ನು ಸಲ್ಲಿಸಿದರು. ಶಾಸಕರು ಸಹಕಾರ ಬ್ಯಾಂಕ್‌ನ ಸಮಸ್ಯೆಗಳನ್ನ ಆಲಿಸಿದ ನಂತರ ಸರ್ಕಾರದಿಂದ ಹಾಗೂ ರಾಜ್ಯ ಸಹಕಾರ ಇಲಾಖೆಯಿಂದ ಈ ಸಹಕಾರ ಸಂಘಗಳಿಗೆ ಅಗತ್ಯವಾಗಿ ಬೇಕಾಗಿರುವ ಹಲವು ಬೇಡಿಕೆಗಳು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಪ್ರಾ.ಕೃ.ಪ.ಸ.ನಿ. ಬ್ಯಾಂಕ್‌ನ ಉಪಾಧ್ಯಕ್ಷ ವಿ.ಎಸ್. ಆನಂದ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಬ್ಯಾಂಕ್‌ನ ಸಿಬ್ಬಂದಿ ವರ್ಗ, ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.