x
ಮುಳ್ಳೂರು, ಅ. ೨೬: ಸೋಮವಾರಪೇಟೆ ತಾಲೂಕು ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ವತಿಯಿಂದ ಸಮೀಪದ ಆಲೂರು-ಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಸಂತೆ ಮೇಳವನ್ನು ಆಯೋಜಿಸಲಾಗಿತ್ತು. ಸಂತೆ ಮೇಳವನ್ನು ಆಲೂರು-ಸಿದ್ದಾಪುರ ಪಿಡಿಓ ಹರೀಶ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಸ್ವಾವಲಂಬಿ ಬದುಕಿಗೆ ಸ್ವಸಹಾಯ ಸಂಘಗಳು ದಾರಿದೀಪವಾಗಿವೆ ಎಂದರು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಜಾನಕಿ ಗಂಗಾಧರ್ ಮಾತನಾಡಿ, ಒಕ್ಕೂಟ ವ್ಯಾಪ್ತಿಯಿಂದ ೨೮ ಸ್ವಸಹಾಯ ಸಂಘಗಳ ಮಹಿಳೆಯರು ಸಂತೆ ಮೇಳದಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ಈ ಸಂದರ್ಭ ಸಂಜೀವಿನಿ ಒಕ್ಕೂಟದ ತಾಲೂಕು ಮೇಲ್ವಿಚಾರಕಿ ಭವ್ಯ, ಸಂಜೀವಿನಿ ತಾಲೂಕು ಒಕ್ಕೂಟದ ಸಂಪತ್, ಕುಮಾರ್ ಸ್ವಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾ.ಪಂ. ಸದಸ್ಯರು ಹಾಜರಿದ್ದರು.