ಮಡಿಕೇರಿ, ಅ. ೨೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅವರ ಸಂಯುಕ್ತ ಆಶ್ರಯದಲ್ಲಿ ಕೇರಳ ಗ್ರಾಮ ಗೌಡ ಸಮಿತಿ ಬಂದಡ್ಕ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ-೨೦೨೪ ತಾ. ೨೭ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ಕೇರಳ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾ ಭವನದಲ್ಲಿ ನಡೆಯಲಿದೆ.

ತಾ. ೨೭ ರಂದು ಬೆಳಿಗ್ಗೆ ೯ ಗಂಟೆಗೆ ಬಂದಡ್ಕ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರದಿAದ ಮೆರವಣಿಗೆ ನಡೆಯಲಿದೆ. ಬಂದಡ್ಕ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊÊಂಗಾಜೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಳಂದಿಲ ರವಿಪ್ರಸಾದ್, ಇತರರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ೯.೩೦ ಗಂಟೆಗೆ ಮಕ್ಕಳಿಂದ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪಂಕಜಾಕ್ಷ ಅಡ್ಕ ಅವರು ನಡೆಸಿಕೊಡಲಿದ್ದಾರೆ.

ನಂತರ ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್. ಗಂಗಾಧರ ಅವರು ಉದ್ಘಾಟಿಸಲಿದ್ದಾರೆ. ಕುತ್ತಿಕೋಲು ಗ್ರಾ.ಪಂ. ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್ ಪಂಚಾಯಿತಿ ಸದಸ್ಯ ಬಿ. ಕೃಷ್ಣನ್, ಕುತ್ತಿಕೋಲು ಗ್ರಾ.ಪಂ. ಸದಸ್ಯರಾದ ಕುಂಞÂರಾಮನ್ ತವನಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸುಭಾಷ್‌ಚಂದ್ರ ರೈ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಿಗ್ಗೆ ೧೧ ಗಂಟೆಗೆ ಗಡಿಬಾಗಲಿ ಅರೆಭಾಷೆನ ಉಳ್ಸಿ-ಬೆಳ್ಸುವ ಕಾರ್ಯ ಎಂಬ ವಿಷಯದ ಬಗ್ಗೆ ಕವಯಿತ್ರಿ ಸ್ಮಿತಾ ಅಮೃತರಾಜ್ ಅವರು ಉಪನ್ಯಾಸ ನೀಡಲಿದ್ದಾರೆ. ನಂತರ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ, ಬಹುಭಾಷಾ ಕವಿಗೋಷ್ಠಿ ನಡೆಯಲಿದೆ.

ಮಧ್ಯಾಹ್ನ ೨ ಗಂಟೆಯಿAದ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಪ್ರವೀಣ್ ಇಳಂದಿಲ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬಳಿಕ ಮಧ್ಯಾಹ್ನ ೩.೩೦ ಗಂಟೆಗೆ ಸಮಾರೋಪ ಸಮಾರಂಭ, ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಉದುಮ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಹೆಚ್. ಕುಂಞAಬು, ಮಡಿಕೇರಿ ಆಕಾಶವಾಣಿ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ, ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕರ್ನಾಟಕ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪೂರ್ವಾಧ್ಯಕ್ಷ ಪಿ.ಸಿ. ಜಯರಾಮ, ಅರಂತೋಡು ತೆಕ್ಕಿಲ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್, ಇತರರು ಪಾಲ್ಗೊಳ್ಳಲಿದ್ದಾರೆ.