ಕೊಡ್ಲಿಪೇಟೆ, ಅ. ೨೬: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಕೃಷಿ ಇಲಾಖೆ ವತಿಯಿಂದ ಮಣ್ಣು ಆರೋಗ್ಯ ಮತ್ತು ಫಲವತ್ತತೆ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮ ಸಮೀಪದ ಈಶಾನ್ಯ ಕಾಫಿ ವರ್ಕ್ಸ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಷಯ ತಜ್ಞ ಮಡಿಕೇರಿಯ ಡಾ. ಲತಾ ಅವರು ಭಾಗವಹಿಸಿ ಮಾತನಾಡಿ, ಮಣ್ಣಿನ ಆರೋಗ್ಯ, ಪರೀಕ್ಷೆ, ಪೋಷಕಾಂಶಗಳ ನಿರ್ವಹಣೆ ಹಾಗೂ ವಿವಿಧ ಬೆಳೆಗಳಲ್ಲಿ ಕೀಟ ನಿರ್ವಹಣೆಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಈಶಾನ್ಯ ಕಾಫಿ ಮಾಲೀಕ ಪ್ರವೀಣ್ ಹೆಚ್.ಜೆ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಬಾಂಧವಿ ಕೆ.ವಿ. ಮತ್ತು ವೇದಪ್ರಿಯಾ ಉಪಸ್ಥಿತರಿದ್ದರು. ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕೃಷಿಕ ಮಹಿಳೆಯರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರುಗಳು ಭಾಗವಹಿಸಿದ್ದರು.