ಸೋಮವಾರಪೇಟೆ, ಅ. ೨೬: ‘ನಾವು’ ಪ್ರತಿಷ್ಠಾನ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್ ವತಿಯಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ ಮತ್ತು ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ಚೌಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಚೈಲ್ಡ್ ರೈಟ್ಸ್ ಟ್ರಸ್ಟ್ನ ಸದಸ್ಯರಾದ ಸುಮನ್ ಮ್ಯಾಥ್ಯೂ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹದ ದುಷ್ಪರಿಣಾಮದ ಕುರಿತು ತಿಳಿಸಿಕೊಟ್ಟರು. ಬಾಲ್ಯವಿವಾಹ ಎಂಬುದೇ ಒಂದು ಅನಿಷ್ಟ ಪದ್ಧತಿ. ವಿದ್ಯಾರ್ಥಿಗಳು ಈ ಬಗ್ಗೆ ಎಚ್ಚರವಹಿಸಬೇಕು. ಬಾಲ್ಯ ವಿವಾಹದ ಪ್ರಕರಣಗಳು ಕಂಡುಬAದರೆ, ಶಾಲಾ ಮುಖ್ಯ ಶಿಕ್ಷಕಿಯರಿಗೆ ತಿಳಿಸಬೇಕು. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡಿದರೆ ಪೋಷಕರು ಶಿಕ್ಷೆಗೆ ಒಳಪಡಬೇಕಾಗುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳು ಮನೆಯಲ್ಲಿ ಪೋಷಕರೊಂದಿಗೆ ಚರ್ಚಿಸಬೇಕು ಎಂದು ಹೇಳಿದರು. ಲೈಂಗಿಕ ಅಪರಾಧಗಳಿಂದ ರಕ್ಷಣೆಯ ವಿಷಯವಾಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ತಿಳಿಸಿದರು. ‘ನಾವು’ ಪ್ರತಿಷ್ಟಾನದ ಸಂಸ್ಥಾಪಕ ಗೌತಮ್ ಕಿರಗಂದೂರು ಮಕ್ಕಳ ಹಕ್ಕುಗಳ ಕುರಿತು ತಿಳಿಸಿದರು. ಮುಖ್ಯ ಶಿಕ್ಷಕ ರಾಜಣ್ಣ, ಸಹ ಶಿಕ್ಷಕರಾದ ಸುಶೀಲಮ್ಮ, ಶೋಭ, ಪದ್ಮಾವತಿ ಹಾಗೂ ರಾಗಿಣಿ ಇದ್ದರು.