ವೀರಾಜಪೇಟೆ, ಅ. ೨೬: ನಗರದಲ್ಲಿದ್ದ ಮಾನಸಿಕ ಅಸ್ವಸ್ಥನೋರ್ವ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ಪುರಸಭೆ ಅಧ್ಯಕ್ಷರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಪುರಸಭೆಯು ಪೊಲೀಸರ ಸಹಕಾರದೊಂದಿಗೆ ಆತನನ್ನು ಪುನರ್ ವಸತಿ ಕೇಂದ್ರಕ್ಕೆ ದಾಖಲು ಮಾಡಿತು.
ಮಾನಸಿಕ ಅಸ್ಪಸ್ಥ ದಾಂಧಲೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಆತನಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆತನನ್ನು ಮೈಸೂರು ನಿರಾಶ್ರಿತರ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ ತಿಳಿಸಿದರು.
ಈ ಸಂದರ್ಭ ವೀರಾಜಪೇಟೆ ನಗರ ಠಾಣಾಧಿಕಾರಿ ಪ್ರಮೋದ್, ಪುರಸಭೆಯ ಸದಸ್ಯರಾದ ಎಸ್.ಹೆಚ್. ಮತೀನ್, ಡಿ.ಪಿ.ರಾಜೇಶ್ ಪದ್ಮನಾಭ ಪುರಸಭೆಯ ಪ್ರಭಾರ ಅರೋಗ್ಯ ಅಧಿಕಾರಿ ಕೋಮಲ ಹಾಗೂ ಪುರಸಭೆಯ ಸಿಬ್ಬಂದಿ ಹಾಜರಿದ್ದರು.