ಬೆಂಗಳೂರು, ಅ. ೨೬ : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನೀಡಿದ್ದು ಇಂದು ಜೈಲು ಶಿಕ್ಷೆ ಪ್ರಕಟಿಸಿದೆ. ಅದರಂತೆ ಸೈಲು ೭ ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಿದೆ.

ಮುಟ್ಟುಗೋಲು ಹಾಕಿದ್ದ ೧೧,೩೧೨ ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಿದ ಪ್ರಕರಣದ ಅರ್ಜಿ

ಶಾಸಕ ಸತೀಶ್ ಸೈಲ್‌ಗೆ ೭ ವರ್ಷಗಳ ಕಠಿಣ ಜೈಲು ಶಿಕ್ಷೆ

(ಮೊದಲ ಪುಟದಿಂದ) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

ಸತೀಶ್ ಸೈಲ್‌ಗೆ ವಂಚನೆ ಪ್ರಕರಣದಲ್ಲಿ ೭ ವರ್ಷ ಜೈಲು ಶಿಕ್ಷೆಯಾದರೆ, ಒಳಸಂಚು ಆರೋಪದಡಿ ೫ ಮತ್ತು ಕಳ್ಳತನ ಆರೋಪದಡಿ ೩ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇದೇ ವೇಳೆ ಕೋರ್ಟ್ ದೊಡ್ಡ ಮಟ್ಟದ ದಂಡವನ್ನು ವಿಧಿಸಿದೆ. ಒಟ್ಟಾರೆ ರೂ. ೪೪ ಕೋಟಿಗೂ ಹೆಚ್ಚು ದಂಡವನ್ನು ಕೋರ್ಟ್ ವಿಧಿಸಿದೆ. ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ.

ಅಂತಹದರಲ್ಲಿ ಸತೀಶ್ ಸೈಲ್‌ಗೆ ೭ ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗಾಗಿ ಅವರ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ ಎಂಬ ಮಾತು ಕೇಳಿಬರುತ್ತಿದೆ. ಒಟ್ಟು ೬ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ಆದೇಶ ಹೊರಡಿಸಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬAಧಿಸಿದAತೆ ದಾಖಲಾದ ೬ ಪ್ರಕರಣಗಳ ಸಂಬAಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು.