ನಾಪೋಕ್ಲು, ಅ. ೨೬: ಸಮಾಜದಲ್ಲಿ ಉತ್ತಮವಾಗಿ ಬದುಕಬೇಕಾದರೆ ಜ್ಞಾನ ಬೇಕು ಜ್ಞಾನದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಜಿನ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಪೂರ್ತಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಮೀಪದ ಕಕ್ಕಬೆ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪೂರ್ತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಲಲಿತಾ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಒಕ್ಕೂಟದ ಉಪಾಧ್ಯಕ್ಷೆ ಸೀತಮ್ಮ, ಸೇವಾಪ್ರತಿನಿಧಿ ಉಮಾಲಕ್ಷಿö್ಮ, ಸಂಘಗಳ ಸದಸ್ಯರು ಹಾಜರಿದ್ದರು.