ವೀರಾಜಪೇಟೆ, ಅ. ೨೮: ಭಾರತೀಯ ಸೇನೆಯ ಅಗ್ನಿಪಥ್ ವಿಭಾಗಕ್ಕೆ ಆಯ್ಕೆಯಾದ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರತಾಪ್ ಎಂ. ಎಂ. ರವರಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶೈನಾ ಕೆ.ಕೆ., ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಎA ಸಾಬು ಕಾಳಪ್ಪ, ಜೈ ಭಾರತ್ ತರಬೇತಿ ಕೇಂದ್ರದ ಮುಖ್ಯಸ್ಥ ಕುಟ್ಟಂಡ ಲವ ಪೊನ್ನಪ್ಪ, ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.