ಕೂಡಿಗೆ, ಅ. ೨೭: ಕುಶಾಲನಗರ ಕನ್ನಡ ಸಿರಿ ಸ್ನೇಹ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕರ್ನಾಟಕದ ಏಕೀಕರಣ ಮತ್ತು ಸ್ವಾತಂತ್ರö್ಯ ಚಳುವಳಿಯಲ್ಲಿ ಕರ್ನಾಟಕ ಮಹಿಳೆಯರು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ತಾ. ೨೮ ರಂದು (ಇಂದು) ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲ್ಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ. ದಯಾನಂದ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೋರನ ಸರಸ್ವತಿ ವಹಿಸಲಿದ್ದಾರೆ.

ಅತಿಥಿಗಳಾಗಿ ಶಕ್ತಿ ದಿನ ಪತ್ರಿಕೆಯ ಉಪ ಸಂಪಾದಕ, ಕುಡೆಕಲ್ ಸಂತೋಷ್, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಸಂಚಾಲಕ ತೆನ್ನೀರ ಮೈನಾ, ಮಡಿಕೇರಿಯ ಗೀತಾ ಸಂಪತ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಕನ್ನಡ ಸಿರಿ ಸ್ನೇಹ ಬಳಗ ಪ್ರಕಟಣೆ ತಿಳಿಸಿದೆ.