ಮಡಿಕೇರಿ, ಅ. ೨೭: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಮಾಡಲಾಗಿರುವ ಜಾತಿಗಣತಿ ಅವೈಜ್ಞಾನಿಕವಾಗಿದೆ. ಸರ್ಕಾರ ಎಚ್ಚೆತ್ತುಕೊಂಡು ವೈಜ್ಞಾನಿಕ ವಾಗಿ ನಡೆಸುವಂತೆ ಒತ್ತಾಯಿಸಲು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ೯ನೇ ವಾರ್ಷಿಕ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಪ್ರಮುಖರು ಮಾತನಾಡಿ, ವರದಿ ಅನುಷ್ಠಾನದಿಂದ ಯಾವುದೇ ಜನಾಂಗಕ್ಕೆ ಅನಾನುಕೂಲ ವಾಗಬಾರದು. ವರದಿಯನ್ನು ಈಗಾಗಲೇ ಹಲವು ಸಮುದಾಯಗಳು ಹಾಗೂ ಸಂಘಸAಸ್ಥೆಗಳೂ ವಿರೋಧಿಸಿವೆ. ಅಲ್ಲದೇ, ವೀರಶೈವ ಸಮುದಾಯದವರು, ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪ್ರತಿಭಟನೆ ನಡೆಸಿ, ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿಗಣತಿಯನ್ನು ವೈಜ್ಞಾನಿಕವಾಗಿ ನಡೆಸದಿದ್ದಲ್ಲಿ ಜಿಲ್ಲೆಯಲ್ಲಿಯೂ ಪ್ರತಿಭಟನೆ ನಡೆಸುವಂತೆ ತೀರ್ಮಾನಿಸಲಾಯಿತು.

ಜಮ್ಮಾ ಕೋವಿ ಹಕ್ಕು ೫ ಎಕರೆ ಕಡಿಮೆ ಇರುವವರಿಗೆ ನೀಡುವುದಿಲ್ಲ. ಆದರೆ, ೫ ಎಕರೆ ೧೦ ಸೆಂಟ್ ಇರುವವರಿಗೆ ನೀಡುತ್ತಾರೆ. ಇದು ಖಂಡನೀಯ. ಆದ್ದರಿಂದ ೫ ಎಕರೆ ಒಳಗೆ ಇರುವವರಿಗೂ ಜಮ್ಮಾ ಕೋವಿ ಹಕ್ಕು ನೀಡುವಂತೆ ಠರಾವು ಮಂಡಿಸಲಾಯಿತು.

ಈ ಸಂದರ್ಭದಲ್ಲಿ ಮಡಿಕೇರಿ ವಿದಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ನಾವು ಸಂಘಟನೆ ಮಾಡುತ್ತಿರುವುದು ಯಾವುದೇ ಜನಾಂಗದ ವಿರುದ್ಧವಲ್ಲ. ರಾಜ್ಯದ ಎಲ್ಲಾ ಜಾತಿಗಳು ಸಂಘಟನೆ ಮಾಡುತ್ತಿವೆ. ಅದೇ ರೀತಿ ಒಕ್ಕಲಿಗ ಸಂಘಟನೆ ಕೂಡ ಸಮುದಾಯದ ಬೆಳವಣಿಗೆಗಾಗಿ ಸಂಘಟನೆಗೊAಡಿದೆ. ಸಂಘದ ನಿವೇಶನಕ್ಕೆ ಆದಷ್ಟು ಶೀಘ್ರದಲ್ಲಿ ಜಾಗದ ವ್ಯವಸ್ಥೆ ಮಾಡಿಕೊಡ ಲಾಗುವುದು ಎಂದು ಭರವಸೆ ನೀಡಿದರು.

ಸಂಘದ ನಿರ್ದೇಶಕ ವಿ.ಪಿ. ಶಶಿಧರ್ ಮಾತನಾಡಿ, ಜಾತಿಗಣತಿ ಜಾತಿಗೆ ವಿರೋಧವಾಗುತ್ತಿದೆ. ನಮ್ಮ ಜನಾಂಗವನ್ನು ರಕ್ಷಣೆ ಮಾಡಬೇಕಾಗಿದೆ. ಇದು ನಮ್ಮ ಕರ್ತವ್ಯ ಎಂದರು.

ಸಂಘದ ನಿರ್ದೇಶಕ ಕೆ.ಎಂ. ಲೋಕೇಶ್ ಮಾತನಾಡಿ, ನಮ್ಮಲ್ಲಿ ೬೦-೭೦ ಸಾವಿರ ಜನಸಂಖ್ಯೆಯಿದೆ ಎಂದು ಹೇಳಲಾಗುತ್ತದೆ. ಈ ಕುರಿತು ಸಂಘದಿAದ ಸಮಿತಿ ರಚಿಸಿ ಪೂರ್ಣ ವಾದ ಮಾಹಿತಿ ಪಡೆಯುವಂತಾಗಬೇಕು ಎಂದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮುದಾಯದ ೫ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮತ್ತು ರಾಜ್ಯಮಟ್ಟದ ವಿವಿಧ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮುದಾಯದ ೭ ಕ್ರೀಡಾ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಮಡಿಕೇರಿ ವಿದಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಎಸ್.ಎಂ.ಚAಗಪ್ಪ ವಹಿಸಿದ್ದರು. ಆಡಳಿತ ಮಂಡಳಿಯ ವರದಿಯನ್ನು ಸದಸ್ಯ ಜಿ.ಆರ್. ಭುವನೇಂದ್ರ ವಾಚಿಸಿದರೆ, ಎಸ್.ಎಂ. ಚಂಗಪ್ಪ ಲೆಕ್ಕಪತ್ರ ಮಂಡಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಾದ ವಿ.ಪಿ.ಸುರೇಶ್, ಪಿ.ಕೆ.ರವಿ, ಕೆ.ಪಿ. ನಾಗರಾಜ್, ಗೌರವ ಕಾರ್ಯದರ್ಶಿ ಎಸ್.ಎಲ್. ಬಸವರಾಜ್, ಸದಸ್ಯರಾದ ಟಿ.ಆರ್. ಪುರುಷೋತ್ತಮ, ಎಸ್.ಪಿ. ಪೊನ್ನಪ್ಪ ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಪದಾಧಿಕಾರಿಗಳು, ಸಮಾಜಬಾಂಧವರು ಪಾಲ್ಗೊಂಡಿದ್ದರು. ಸಂಘದ ನಿರ್ದೇಶಕಿ ಜಾನಕಿ ವೆಂಕಟೇಶ್ ಪ್ರಾರ್ಥಿಸಿದರೆ, ನಿರ್ದೇಶಕ ವಿ.ಪಿ.ಶಶಿಧರ್ ನಿರೂಪಿಸಿದರು.