ಶ್ರೀಮಂಗಲ, ಅ. ೨೭ : ನಮ್ಮ ಜನಾಂಗದ ಆಚಾರ ವಿಚಾರ ಸಂಸ್ಕೃತಿಯ ಬೆಳವಣಿಗೆ ಹಾಗೂ ಸಂರಕ್ಷಣೆಗೆ ಜನಾಂಗದ ಪ್ರತಿಯೊಬ್ಬರು ಸಮಯ,ಸೇವೆ ಹಾಗೂ ಆರ್ಥಿಕ ನೆರವನ್ನು ಮೀಸಲಿಡಬೇಕೆಂದು ಶ್ರೀಮಂಗಲ ಕೊಡವ ಸಮಾಜದ ಕಾರ್ಯದರ್ಶಿ ಮಚ್ಚಮಾಡ ವಿಜಯ್ ಅವರು ಅಭಿಪ್ರಾಯಪಟ್ಟರು.

ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯುತ್ತಿರುವ ಚಂಗ್ರಾAದಿ ಪತ್ತಾಲೋದಿ ಕಾರ್ಯಕ್ರಮದ ೯ನೇ ದಿನದ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ದೇವರಿಗೆ ಭಂಡಾರ ಹಾಕುವಂತೆ ಕೊಡವಾಮೆಗೆ ನಮ್ಮ ಕೊಡುಗೆ ನೀಡಬೇಕು ಎಂದರು.

ಮತ್ತೋರ್ವ ಮುಖ್ಯ ಅತಿಥಿ ಯುಕೊ ಸಂಘಟನೆಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಮಾತನಾಡಿ ಕೊಡವ ಸಮಾಜಗಳು ಮದುವೆ ಮಾಡುವ ಕಲ್ಯಾಣ ಮಂಟಪ ಎನ್ನುವ ಅಪವಾದವನ್ನು ಟಿ. ಶೆಟ್ಟಿಗೇರಿ ಕೊಡವ ಸಮಾಜ ಪತ್ತಾಲೋದಿ ಕಾರ್ಯಕ್ರಮ ಮಾಡುವ ಮೂಲಕ ದೂರಸರಿಸಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲಿರ ಹರೀಶ್ ಅಪ್ಪಯ್ಯ ಅವರು ನಾವು ಪತ್ತಾಲೋದಿ ಕಾರ್ಯಕ್ರಮಕ್ಕೆ ಪೀಠಿಕೆ ಹಾಕಿದ್ದೇವೆ. ಇದನ್ನು ಸೂರ್ಯ ಚಂದ್ರ ಇರುವವರೆಗೆ ನಡೆಸಿಕೊಂಡು ಹೋಗುವ ಜವಾಬ್ದಾರಿ ಜನಾಂಗದ ಪ್ರತಿಯೊಬ್ಬರದ್ದಾಗಿದೆ ಎಂದರು.

ಶ್ರೀಮAಗಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದಿಂದ ವಿವಿಧ ಕೊಡವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ನೆಲ್ಲೀರ ನೀನಾ ಪೂಣಚ್ಚ, ಕಳ್ಳಿಚಂಡ ದೀನಾ ಉತ್ತಪ್ಪ ವೇದಿಕೆಯಲ್ಲಿ ಹಾಜರಿದ್ದರು.

ಚೆಟ್ಟಂಡ ಲತಾ ಚರ್ಮಣ ಪ್ರಾರ್ಥಿಸಿ, ಬಾದುಮಂಡ ವಿಷ್ಣು ಕಾರ್ಯಪ್ಪ ಸ್ವಾಗತಿಸಿ ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ವಂದಿಸಿದರು. ನಿರ್ದೇಶಕರುಗಳಾದ ಚಂಗುಲAಡ ಅಶ್ವಿನಿ ಸತೀಶ್, ಮುಕ್ಕಾಟಿರ ಸಂದೀಪ್, ಕರ್ನಂಡ ರೂಪ ದೇವಯ್ಯ, ಚಂಗುಲAಡ ಸತೀಶ್, ಕೋಟ್ರಮಾಡ ಸುಮಂತ್ ಮಾದಪ್ಪ ಕಾರ್ಯಕ್ರಮ ನಿರ್ವಹಿಸಿದರು.