ಶನಿವಾರಸAತೆ, ಅ. ೨೮: ಪಟ್ಟಣದ ಬ್ರೆöÊಟ್ ಅಕಾಡೆಮಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳು ತಮ್ಮ ಮನೆಯ ಅಂಗಳ ಹಾಗೂ ಹಿತ್ತಲಲ್ಲಿ ಬೆಳೆದಿದ್ದ ಹಣ್ಣು ಹಂಪಲು, ತರಕಾರಿ, ಹಲವು ವಿಧದ ಸೊಪ್ಪುಗಳು, ತೆಂಗಿನಕಾಯಿ, ಹೂವುಗಳು ಹಾಗೂ ಮನೆಯಲ್ಲೇ ತಯಾರಿಸಿದ ತಿಂಡಿತಿನಿಸುಗಳನ್ನು ತಂದು ಸಂತೆಯಲ್ಲಿ ಮಾರಾಟ ಮಾಡಿ ಸಂಭ್ರಮಿಸಿದರು. ಪೋಷಕರು, ಶಿಕ್ಷಕರು, ಸಿಬ್ಬಂದಿ ಸಂತೆಯಲ್ಲಿ ಸಡ ಗರದಿಂದ ಪಾಲ್ಗೊಂಡು ಬೇಕಾದುದನ್ನು ಖರೀದಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಸಂತೆ ಮಾರುಕಟ್ಟೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿದ್ಯಾಸಂಸ್ಥೆ ಕಾರ್ಯದರ್ಶಿ ಹೇಮಾ ಪರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕವರಾಗಿರುವಾಗಲೇ ಅವರಲ್ಲಿ ವ್ಯವಹಾರ ಜ್ಞಾನದ ಅರಿವು ಮೂಡಿಸುವ ಉದ್ದೇಶದಿಂದ ಮಕ್ಕಳ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯಶಿಕ್ಷಕ, ಸಹಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.