ಮಡಿಕೇರಿ, ಅ. ೨೭: ರಾಷ್ಟಿçÃಯ ಸ್ವಯಂಸೇವಕ ಸಂಘದ ವತಿಯಿಂದ ಮಡಿಕೇರಿ ನಗರದಲ್ಲಿ ವಿಜಯದಶಮಿ ಪ್ರಯುಕ್ತ ಗಣವೇಷಧಾರಿ ಸ್ವಯಂಸೇವಕರ ಪಥಸಂಚಲನ ನಡೆಯಿತು.
ನಗರದ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸೇರಿದ ಸ್ವಯಂಸೇವಕರು ಧ್ವಜವಂದನೆ ಮತ್ತು ಪ್ರಾರ್ಥನೆ ಬಳಿಕ ಅಲ್ಲಿಂದ ಘೋಷ್ ವಾದನದ ಮೂಲಕ ಹೆಜ್ಜೆ ಹಾಕುತ್ತ ಇಂದಿರಾ ಗಾಂಧಿ ವೃತ್ತ, ಗಣಪತಿ ಬೀದಿ, ಮಹದೇವಪೇಟೆ, ಹಳೆ ಬಸ್ ನಿಲ್ದಾಣದ ಮೂಲಕ ಜ.ತಿಮ್ಮಯ್ಯ ವೃತ್ತದಿಂದ ಗಾಂಧಿ ಮೈದಾನದಲ್ಲಿ ಕೊನೆಗೊಂಡಿತು.
ರಸ್ತೆಯುದ್ದಕ್ಕೂ ಮಹಿಳೆಯರು ಹಾಗೂ ಸಾರ್ವಜನಿಕರು ಭಗವಾಧ್ಜಜ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆಗೈದು ಸ್ವಾಗತಿಸಿದರು.
ಪುಟಾಣಿ ಮಕ್ಕಳು ಸ್ವಾತಂತ್ರö್ಯ ಹೋರಾಟಗಾರರು ಮತ್ತು ಸ್ವಾಮೀಜಿಗಳ ವೇಷ ಧರಿಸಿ ಸ್ವಾಗತಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಂಘಚಾಲಕ್ ಚಕ್ಕೇರ ಮನು ಕಾವೇರಪ್ಪ, ಜಿಲ್ಲಾ ಕಾರ್ಯವಾಹ ರವಿಕುಮಾರ್, ಸಹಕಾರ್ಯವಾಹ ಕುಟ್ಟಂಡ ಮಿರನ್ ಕಾವೇರಪ್ಪ, ಪ್ರಮುಖರಾದ ಅಯ್ಯಪ್ಪ, ದಿನೇಶ್ ಕುಮಾರ್, ಮಹೇಶ್ ಕುಮಾರ್, ಅರುಣ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಮಾಜಿ ಜಿಲ್ಲಾಧ್ಯಕ್ಷರುಗಳಾದ ಬಿ.ಬಿ. ಭಾರತೀಶ್, ರಾಬಿನ್ ದೇವಯ್ಯ, ಮೂಡಾ ಮಾಜಿ ಅಧ್ಯಕ್ಷ ರಮೇಶ್ ಹೊಳ್ಳ, ನಗರಸಭಾ ಸದಸ್ಯರಾದ ಕೆ.ಎಸ್. ರಮೇಶ್, ಉಮೇಶ್ ಸುಬ್ರಮಣಿ, ಪ್ರಮುಖರಾದ ಬಿ.ಕೆ. ಅರುಣ್ ಕುಮಾರ್, ಬಿ.ಕೆ. ಜಗದೀಶ್, ಕಾಂಗೀರ ಸತೀಶ್, ರಾಯ್ ತಮ್ಮಯ್ಯ ಹಾಗೂ ಇತರರು ಇದ್ದರು.