ಮಡಿಕೇರಿ, ಅ. ೨೮: ಬೆಂಗಳೂರಿನ ಕುವೆಂಪು ಕಲಾನಿಕೇತನ ಸಂಸ್ಥೆ ವತಿಯಿಂದ ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ೧೪೧ನೇ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರಿಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಪ್ರಶಸ್ತಿ ನೀಡಿ ಗೌರವಿಸಿತು. ತುಮಕೂರ್ ನರಸಿಂಹಗಿರಿ ಕ್ಷೇತ್ರದ ಪೀಠಾಧ್ಯಕ್ಷ ಶ್ರೀ ಡಾ. ಹನುಮಂತನಾಥ ಮಹಾಸ್ವಾಮಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೋ ಜಯಪ್ರಕಾಶ್ ಗೌಡ, ಮೈಸೂರು, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸಾಹಿತಿ ಸತೀಶ್, ಕುವೆಂಪು ಅನಿಕೇತನ ಸಂಸ್ಥೆಯ ಅಧ್ಯಕ್ಷ ಕುವೆಂಪು ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.