ಶನಿವಾರಸಂತೆ, ಅ. ೨೭: ದೇಶದ ಪ್ರಗತಿಗೆ ವಿಜ್ಞಾನ ಹಾಗೂ ತಂತ್ರಜ್ಞಾನ ಅತ್ಯವಶ್ಯಕವಾಗಿದ್ದು ವಿಜ್ಞಾನವಿಲ್ಲದೇ ದೇಶದ ಅಭಿವೃದ್ಧಿ ಅಸಾಧ್ಯ ಎಂದು ಕೊಡ್ಲಿಪೇಟೆ ಸೆಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ದೊಡ್ಡಮನಿ ಪ್ರತಿಪಾದಿಸಿದರು.

ಕೊಡ್ಲಿಪೇಟೆ ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸೃಜನಾತ್ಮಕತೆ, ವೈಜ್ಞಾನಿಕ ಮನೋಭಾವ, ಕೌಶಲ ಅಭಿವೃದ್ಧಿ ಹೊರಹೊಮ್ಮುತ್ತದೆ. ವಿಜ್ಞಾನಕ್ಕೆ ಸಂಬAಧಿಸಿದ ನೂತನ ಮಾದರಿಗಳನ್ನು ಮಾಡುವುದರಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವುದರಲ್ಲಿ ಸಂದೇಹವಿಲ್ಲ ಎಂದರು.

ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಸಸ್ಯಶಾಸ್ತç, ಪ್ರಾಣಿಶಾಸ್ತç, ರಸಾಯನಶಾಸ್ತç, ಇತಿಹಾಸ, ಭೌಗೋಳಿಕ ಹಾಗೂ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿ ನೀಡುತ್ತಿದ್ದ ವಿವರಣೆ ಅತಿಥಿಗಳು, ಪೋಷಕರು, ಶಿಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಶಾಲಾ ವ್ಯವಸ್ಥಾಪಕಿ ಸಿಸ್ಟರ್ ಲೂಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಶಿಕ್ಷಕರು, ಸಿಬ್ಬಂದಿ, ಪೋಷಕರು ಹಾಜರಿದ್ದರು. ವಿದ್ಯಾರ್ಥಿನಿ ಸಬಾ ಸ್ವಾಗತಿಸಿ, ಆಯಿಶಾ ನಿರೂಪಿಸಿದರು.