ಮಡಿಕೇರಿ, ಅ. ೨೯: ಕೇರಳದ ಬಂದಡ್ಕದಲ್ಲಿ ನಡೆದ ಗಡಿನಾಡ ಅರೆಭಾಷೆ ಉತ್ಸವ ಹಬ್ಬದ ವಾತಾ ವರಣ ಮೂಡಿಸಿತು.

ಬಂದಡ್ಕದ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರದಿAದ ಹೊರಟ ಮೆರವಣಿಗೆಯನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ ಕೊಂಗಾಜೆ ಉದ್ಘಾಟನೆ ಮಾಡಿದರು. ಬಂದಡ್ಕ ಪಟ್ಟಣದ ಮೂಲಕ ಸಾಗಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬಂದ ಮೆರವಣಿಗೆ ಊರಿಡಿ ಹಬ್ಬದ ವಾತಾವರಣ ನಿರ್ಮಾಣ ಮಾಡಿತು.

ಬಹಳ ಶಿಸ್ತಿನಿಂದ, ವೈಭವದಿಂದ ಸಾಗಿ ಬಂದ ಮೆರವಣಿಗೆಯು ಬಂದಡ್ಕ ಪಟ್ಟಣದಲ್ಲಿ ಜನರ ಕಣ್ಮನ ಸೆಳೆಯಿತು. ಪೂರ್ಣಕುಂಭ ಹಿಡಿದ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆಯಲ್ಲಿ ಬಣ್ಣದ ಕೊಡೆಗಳು ಹೊಳೆಯುತ್ತಿದ್ದವು. ಕುಣಿತ, ಭಜನೆ, ಕೋಲಾಟ ಮೆರವಣಿಗೆಗೆ ಮೆರುಗು ಹೆಚ್ಚಿಸಿತು.

ಗಡಿನಾಡ ಉತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅರೆಭಾಷೆ, ಸಂಸ್ಕೃತ ಸಂಪ್ರದಾಯ ಬಿಂಬಿತವಾಯಿತು.

ಅಮರ ಸುಳ್ಯದ ಕ್ರಾಂತಿ, ಕೃಷಿ ಚಟುವಟಿಕೆಗಳು, ಆಟಿ ಕಳಂಜ, ದೀಪಾವಳಿ ಹಬ್ಬ, ಸಿದ್ಧವೇಷ ಕುಣಿತ, ವಾಲಗ ಕುಣಿತ, ಕೋಲಾಟ, ಎಲ್ಲವೂ ಪ್ರದರ್ಶನಗೊಂಡವು. ಉಳುಮೆಯ ಜೋಡೆತ್ತಿನ ಪ್ರದರ್ಶನ ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.

ಅದರಂತೆ ಹೆಣ್ಣು ಮಗುವಿನ ಹುಟ್ಟಿನಿಂದ ಮದುವೆ ಮಾಡಿ ಕೊಡುವ ತನಕದ ಶಾಸ್ತç ಸಂಪ್ರದಾಯಗಳನ್ನು ಒಳಗೊಂಡ ಕಾರ್ಯಕ್ರಮ ಸೇರಿದಂತೆ ಊರಿನವರು ಮತ್ತು ಆಹ್ವಾನಿತ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಬಂದಡ್ಕ ಸುಬ್ರಹ್ಮಣ್ಯ ದೇವಾಲಯದ ಮಯೂರ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲೆಯ ಉದುಮ ಕ್ಷೇತ್ರದ ಶಾಸಕ ಸಿ.ಎಚ್.ಕುಂಞAಬು ಅವರು ಉದ್ಘಾಟಿಸಿ ಮಾತನಾಡಿ, ಬಂದಡ್ಕ ಭಾಗದಲ್ಲಿ ಇಂತಹ ಉತ್ಸವ ನಡೆಸುತ್ತಿರುವುದು ಸಂತೋಷ. ಈ ಗಡಿಭಾಗದಲ್ಲಿ ಅರೆಭಾಷೆಯನ್ನು ಮಾತನಾಡುತ್ತಿದ್ದಾರೆ. ತುಳು ಅಕಾಡೆಮಿಯ ರೀತಿಯಲ್ಲಿ ಮಂಜೇಶ್ವರದಲ್ಲಿ ಯಕ್ಷಗಾನ ಅಕಾಡೆಮಿ ಆರಂಭ ಮಾಡಿ ಯಶಸ್ವಿಯಾಗಿದ್ದೇನೆ. ತುಳು, ಅರೆಭಾಷೆ, ಯಕ್ಷಗಾನ, ಬ್ಯಾರಿ ಸೇರಿದಂತೆ ಎಲ್ಲಾ ಅಕಾಡೆಮಿಗಳನ್ನು ಸೇರಿಸಿ ಕಾಸರಗೋಡಿನಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಲು ಸಹಕರಿಸುವಂತೆ ಕೋರಿದರು.

ಅಂತರರಾಜ್ಯ ಬಸ್ ಸರ್ವೀಸ್ ಆರಂಭಿಸಬೇಕು ಎಂದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಬಂದಡ್ಕದ ಪ್ರಮುಖರು ಮನವಿ ಸಲ್ಲಿಸಿದರು. ಈ ಮಾರ್ಗದಲ್ಲಿ ಹೊಸ ಬಸ್ ಮಾರ್ಗ ಮಂಜೂರು ಮಾಡಿಸಿ ಸರ್ಕಾರಿ ಬಸ್ ಸೇವೆ ಕಲ್ಪಿಸುವಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಶಾಸಕರು ಹೇಳಿದರು.

ಸುಳ್ಯದಿಂದಲೂ ಬಸ್ ಆರಂಭ ಮಾಡುವಂತೆ ಪಿ.ಸಿ. ಜಯರಾಮ್, ಟಿ.ಎಂ. ಶಹೀದ್ ಅವರಿಗೆ ಇದೇ ವೇಳೆಯಲ್ಲಿ ಬಂದಡ್ಕದ ಪ್ರಮುಖರು ಮನವಿ ನೀಡಿದರು.

ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಮಾತನಾಡಿ ಹೊಸ ಹೊಸ ಸಾಧ್ಯತೆಗಳನ್ನು ಅರೆಭಾಷೆ ಅಕಾಡೆಮಿಯಿಂದ ಪ್ರಸ್ತುತಪಡಿಸಿದ್ದು, ಹೊಸ ಹೊಸ ಸಾಧ್ಯತೆಗಳನ್ನು ಅನ್ವೇಷಣೆ ಮಾಡಬೇಕಿದೆ ಎಂದರು.

ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಸಾಧಕರನ್ನು ಸನ್ಮಾನಿಸಿದರು. ಕರ್ನಾಟಕ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ. ತೀರ್ಥರಾಮ ಬಹುಮಾನ ವಿತರಿಸಿದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಅರೆಭಾಷೆ ಗಡಿನಾಡ ಉತ್ಸವ ಸಂಘಟನಾ ಸಮಿತಿಯ ಅಧ್ಯಕ್ಷರಾದ ಕೊರಂಗಾಜೆ ವೆಂಕಟ್ರಮಣ, ಪ್ರಧಾನ ಕಾರ್ಯದರ್ಶಿ ಚರಣ್ ಕುಮಾರ್ ಪಾಲಾರು ಮಾವಜಿ, ಕೋಶಾಧಿಕಾರಿ ಮೋಹನ್ ಇಳಂದಿಲ, ತರುಣ ಘಟಕದ ಅಧ್ಯಕ್ಷ ಗಣೇಶ್ ಪಾಲಾರುಮೂಲೆ, ಅಕಾಡೆಮಿ ಸದಸ್ಯರು, ಇತರರು ಇದ್ದರು.