ಪೊನ್ನಂಪೇಟೆ, ಅ. ೨೯: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ೨೦೨೪- ೨೫ ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಗೋಣಿಕೊಪ್ಪಲಿನ ಹಿರಿಯ ವೈದ್ಯರಾದ ಡಾ.ಕೆ. ಕೆ. ಶಿವಪ್ಪ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸಂಘಟನೆಯ ಮೂಲಕ ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಬದುಕು ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.
ನಾಡಿನ ಹಿಂದಿನ ಹಿರಿಯ ಶಿಕ್ಷಣ ಪ್ರೇಮಿಗಳ ಮುಂದಾಲೋಚನೆ, ತ್ಯಾಗ, ಶ್ರಮದ ಫಲವಾಗಿ ಜನ್ಮ ತಳೆದ ಕಾವೇರಿ ವಿದ್ಯಾಸಂಸ್ಥೆ ಇಂದು ತನ್ನದೇ ಆದ ಛಾಪು ಮೂಡಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಸಂಸ್ಥೆ ನಿರ್ಮಾಣವಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಪ್ರೊ. ಇಟ್ಟಿರ ಕೆ. ಬಿದ್ದಪ್ಪ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ಉಪಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎಂ. ಡಿ. ರೇಷ್ಮಾ, ಬಿ.ಎಸ್. ದೀಪ್ತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಸಿ.ಬಿ. ಸಚಿನ್ ಅಯ್ಯಪ್ಪ, ಕಾರ್ಯದರ್ಶಿ ಎಂ. ಎಫ್. ನಿಹಾರ್ ಫಾತಿಮಾ, ಸಾಂಸ್ಕೃತಿಕ ಕಾರ್ಯದರ್ಶಿ ಸಿ.ವಿ. ಅನ್ವಿತ್ ಕುಮಾರ್, ಕ್ರೀಡಾ ಕಾರ್ಯದರ್ಶಿಕೆ. ಬಿ. ದರ್ಶಿಕ್ ಮುತ್ತಣ್ಣ, ಜಂಟಿ ಕಾರ್ಯದರ್ಶಿಗಳಾದ ಬಿ.ಎನ್. ಅಭಿಷೇಕ್, ಕೆ. ತಸ್ಮಾ ಬೆಳ್ಳಿಯಪ್ಪ, ತರಗತಿ ಪ್ರತಿನಿಧಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.