ಮಡಿಕೇರಿ, ಅ. ೨೯: ಕೊಡಗು ಗೌಡ ನಿವೃತ್ತ ನೌಕರರ ಸಂಘದ ೨೦ನೇ ವಾರ್ಷಿಕ ಮಹಾಸಭೆ ನ .೫ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾರತೀಯ ವಾಯುಪಡೆಯ ನಿವೃತ್ತ ಕಮಾಡೋರ್ ಕೆದಂಬಾಡಿ ಸತೀಶ್ ಅಯ್ಯಪ್ಪ ಉಪಸ್ಥಿತರಿರುವರು. ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯಿನಿ ಚೆರಿಯಮನೆ ಕಮಲ ಬೋಪಯ್ಯ ಅವರನ್ನು ಸನ್ಮಾನಿಸಲಾಗುವದು ಎಂದು ಸಂಘದ ಕಾರ್ಯದರ್ಶಿ ಬಾರಿಕೆ ಅಯ್ಯಪ್ಪ ತಿಳಿಸಿದ್ದಾರೆ.