ಮಡಿಕೇರಿ, ಅ. ೨೯ : ಭಾರತ ಚುನಾವಣಾ ಆಯೋಗವು ಪ್ರತೀ ವರ್ಷ ಜನವರಿ ೧ನ್ನು ಅರ್ಹತಾ ದಿನಾಂಕವಾಗಿ ನಿಗಧಿಪಡಿಸಿಕೊಂಡು ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯವನ್ನು ಕೈಗೊಳ್ಳಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.

ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬAಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ತಾ. ೨೯ ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್, ೨೮ ರವರೆಗೆ ಸರಿಪಡಿಸಿಕೊಳ್ಳಲು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ನವೆಂಬರ್, ೦೯, ೧೦, ೨೩ ಮತ್ತು ೨೪ ರಂದು ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧ ವಿಶೇಷ ಅಭಿಯಾನ ನಡೆಯಲಿದೆ.

ಡಿಸೆಂಬರ್ ೨೪ ರಂದು ಮನವಿ/ ಆಕ್ಷೇಪಣೆಗಳ ಸರಿಪಡಿಸುವ ಕಾರ್ಯ ನಡೆಯಲಿದೆ. ೨೦೨೫ ರ ಜನವರಿ, ೦೧ ರಂದು ಅಂತಿಮ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ನಡೆಯಲಿದೆ. ೨೦೨೫ ಜನವರಿ, ೦೬ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಈ ಸಂಬAಧ ತಮ್ಮ ತಮ್ಮ ಹಂತದಲ್ಲಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಕೋರಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕೊಡಗು ಜಿಲ್ಲೆಯ ೨೦೮-ಮಡಿಕೇರಿ ಮತ್ತು ೨೦೯-ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ, ತಾಲೂಕು ಕಚೇರಿಗಳಲ್ಲಿ, ಉಪ ವಿಭಾಗಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ತಾ. ೨೯ ರಂದು ಪ್ರಕಟಣೆ ಮಾಡಲಾಗಿದ್ದು, ಸಾರ್ವಜನಿಕರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

ಕರಡು ಮತದಾರರ ಪಟ್ಟಿಯನ್ನು hಣಣಠಿs://ಛಿeo.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು hಣಣಠಿs://ಞoಜಚಿgu.ಟಿiಛಿ.iಟಿ ತಿebsiಣe ನಲ್ಲಿಯೂ ಸಹ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ ಅಂದರೆ ಅಕ್ಟೋಬರ್ ೨೯ ರಿಂದ ನವೆಂಬರ್ ೨೮ ರವರೆಗೆ ೨೦೨೫ ರ ಜನವರಿ ೦೧, ೨೦೨೫ ರ ಏಪ್ರಿಲ್ ೦೧, ೨೦೨೫ ರ ಜುಲೈ ೦೧ ಮತ್ತು ೨೦೨೫ ರ ಅಕ್ಟೋಬರ್ ೦೧ ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು ೧೮ ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ-೬ ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-೭ ರಲ್ಲಿ ಆಕ್ಷೇಪಣೆ ಅರ್ಜಿಯನ್ನು ವೇಳಾಪಟ್ಟಿ ದಿನಾಂಕದಲ್ಲಿ ಪಡೆದುಕೊಳ್ಳಲಾಗುತ್ತದೆ ಎಂದರು.

ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-೮ ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಆರ್.ಐಶ್ವರ್ಯ ವಿವರಿಸಿದರು.

ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-೬ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಮೂನೆ-೬, ೬ಎ, ೭ ಮತ್ತು ೮ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP) ಹಾಗೂ hಣಣಠಿs://voಣeಡಿs.eಛಿi.gov.iಟಿ/ / ಗಿಔಖಿಇಖS’ SಇಖಗಿIಅಇ Pಔಖಖಿಂಐ ಮೂಲಕ ಅನ್‌ಲೈನ್‌ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರತಿನಿಧಿ ತೆನ್ನಿರಾ ಮೈನಾ ಅವರು ಮಾತನಾಡಿ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಪ್ರತೀ ಬೂತ್‌ಗಳಿಗೆ ಬಿಎಲ್‌ಎ(ಬೂತ್ ಮಟ್ಟದ ಏಜೆಂಟ್) ಗಳನ್ನು ನಿಯೋಜಿಸಲಾಗಿದ್ದು, ಅವರನ್ನು ಬೂತ್ ಮಟ್ಟದ ಅಧಿಕಾರಿಗಳ ಜೊತೆ ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಭಾರತೀಯ ಜನತಾ ಪಕ್ಷದ ಪ್ರಮುಖರಾದ ಸಜಿಲ್ ಕೃಷ್ಣ, ಬಹುಜನ ಸಮಾಜ ಪಕ್ಷದ ಕವಿತಾ ಅವರು ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧ ಹಲವು ಮಾಹಿತಿ ನೀಡಿದರು. ಚುನಾವಣಾ ಶಿರಸ್ತೇದಾರ್ ಕೆ.ಜಿ.ಮಧುಕರ, ಅನಿಲ್ ಕುಮಾರ್ ಇದ್ದರು.