ಮಡಿಕೇರಿ, ಅ. ೨೯: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರು ಕ್ಷೇತ್ರದ ವಿವಿಧೆಡೆ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಚಾಲನೆ ಹಾಗೂ ನೆಲ್ಲಿಹುದಿಕೇರಿಯಲ್ಲಿ ಕಸವಿಲೇವಾರಿ ಘಟಕ ಉದ್ಘಾಟಿಸಿದರು.
ಕಸಮುಕ್ತ ಸಮಾಜ ನಿರ್ಮಾಣಕ್ಕೆ ಕರೆ
ಸಿದ್ದಾಪುರ, ಅ. ೨೯: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಸಮೀಪದಲ್ಲಿ ರೂ. ೨೨ ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನೂತನ ಕಸ ವಿಲೇವಾರಿ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಲಾಗಿದೆ. ಹೊಸಕೋಟೆ ಗ್ರಾಮ ಪಂಚಾಯಿತಿ ಮಾತ್ರ ಘಟಕ ಪ್ರಾರಂಭಿಸಲು ಉಳಿದಿದೆ. ಮುಂದಿನ ದಿನಗಳಲ್ಲಿ ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ನೆಲ್ಲಿಹುದಿಕೇರಿ ಗ್ರಾಮದಲ್ಲಿ ಕಸ ಮುಕ್ತ ಗ್ರಾಮವನ್ನಾಗಿ ಮಾಡಬೇಕೆಂದರು. ಪ್ಲಾಸ್ಟಿಕ್ ನಿಷೇಧಿಸಬೇಕು ಎಂದು ಸಲಹೆ ನೀಡಿದರು. ನೆಲ್ಲಿಹುದಿಕೇರಿಯ ಗ್ರಾಮಸ್ಥರು ಎಲ್ಲೆಂದರಲ್ಲಿ ಕಸಗಳನ್ನು ಎಸೆಯಬಾರದು. ಪಂಚಾಯಿತಿಗೆ ಸೇರಿದ ವಾಹನದಲ್ಲಿ ಕಸವನ್ನು ಹಾಕಬೇಕು. ಮುಂದಿನ ದಿನಗಳಲ್ಲಿ ಪಂಚಾಯಿತಿಗೆ ಮತ್ತೊಂದು ಕಸ ವಿಲೇವಾರಿಗೆ ವಾಹನ ನೀಡುವುದಾಗಿ ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಸಾಬು ವರ್ಗೀಸ್ ಮಾತನಾಡಿ, ತಾನು ಅಧ್ಯಕ್ಷನಾಗಿರುವ ಅವಧಿಯಲ್ಲಿ ಕಸವಿಲೇವಾರಿಯ
(ಮೊದಲ ಪುಟದಿಂದ) ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ರೂ. ೨೨ ಲಕ್ಷ ಅನುದಾನವನ್ನು ವಿವಿಧ ಯೋಜನೆಯಡಿಯಲ್ಲಿ ಬಿಡುಗಡೆಗೊಳಿಸಿ ಕಸವಿಲೇವಾರಿ ಘಟಕ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಇದೀಗ ಕಸದ ಸಮಸ್ಯೆ ಬಹುತೇಕ ಬಗೆಹರಿದಿದೆ. ಸಾರ್ವಜನಿಕರು ತಮ್ಮ ಮನೆಯ ಕಸಗಳನ್ನು ವಿಂಗಡಿಸಿ ವಾಹನಕ್ಕೆ ಹಾಕಬೇಕೆಂದು ಮನವಿ ಮಾಡಿದರು.
ಕುಶಾಲನಗರ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಪರಮೇಶ್, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷಿö್ಮ, ಉಪಾಧ್ಯಕ್ಷೆ ಪ್ರಮೀಳ, ಪಿಡಿಓ ನಂಜುAಡಸ್ವಾಮಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಯೂತ್ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಷಂಶುದ್ದೀನ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಸುನೀತಾ ಮಂಜುನಾಥ್, ಬಷೀರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.
ಕೂಡಿಗೆ, ಅ. ೨೯: ರೂ. ೯.೪೦ ಲಕ್ಷ ವೆಚ್ಚದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ರಸ್ತೆ, ಮತ್ತು ಹಿಂದೂ ರುದ್ರಭೂಮಿಗೆ ಹೋಗುವ ರಸ್ತೆಯ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತÀರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸುವ ಕ್ರಿಯಾ ಯೋಜನೆಯನ್ನು ಕೈಗೊಳ್ಳಲಾಗಿದೆ ಅದರಂತೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಿಂದ ಚಿಕ್ಕತ್ತೂರು ಗ್ರಾಮದ ಮೂಲಕ ಹಾರಂಗಿ ಸಂಪರ್ಕ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಅದರ ಮೂಲಕ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ.ಹಮೀದ್, ಅರುಣ್ ರಾವ್, ಅನಂತ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ವಿ.ಸಣ್ಣಪ್ಪ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಎನ್. ಪ್ರಸನ್ನ, ಪಕ್ಷದ ಪ್ರಮುಖರಾದ ಹರೀಶ್,ಪ್ರಕಾಶ್, ಸಾವಿತ್ರಿ ರಾಜನ್, ಪವಿತ್ರ, ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಗುತ್ತಿಗೆದಾರ ಮಧು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.