ಮಡಿಕೇರಿ, ಅ.೨೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ನೀಮಾ ಕೊಡಗು ಸಹಯೋಗದೊಂದಿಗೆ ೯ ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆಯು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಘೋಷವಾಕ್ಯದೊಂದಿಗೆ, ಮೇಕೇರಿ ಬಳಿಯ ಸತ್ಯಸಾಯಿ ಮಂದಿರದಲ್ಲಿ ನಡೆಯಿತು. ರಾಷ್ಟಿçÃಯ ಆಯುರ್ವೇದ ದಿನಾಚರಣೆಯಲ್ಲಿ ಯೋಗ ಪ್ರಾತ್ಯಾಕ್ಷಿಕೆ ಹಾಗೂ ಶ್ರೀ ಧನ್ವಂತರಿ ಹೋಮ ಜರುಗಿತು.
ಜಿಲ್ಲಾ ಆಯುಷ್ ಅಧಿಕಾರಿ ಡಾ|| ಶೈಲಜಾ.ಜಿ, ಅವರು ಮಾತನಾಡಿ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆ ಕುರಿತು ಮಾಹಿತಿ ನೀಡಿದರು.
ಆಯುಷ್ ಇಲಾಖೆಯಿಂದ ಒಂದು ವಾರದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ, ಪರಿಸರ ರಕ್ಷಣೆ ಮತ್ತು ಸಸ್ಯ ಹಾಗೂ ಪ್ರಾಣಿಗಳ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ ಹಾಗೂ ೨೨ ರಿಂದ ೪೫ ವಯಸ್ಸಿನ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ, ಮಾನವನ ಸ್ವಾಸ್ಥö್ಯ ರಕ್ಷಣೆ ಹಾಗೂ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ ಮತ್ತು ೪೫ ವರ್ಷ ಮೇಲ್ಪಟ್ಟ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರಗಳ ಬಗ್ಗೆ ನಡೆಸಲಾದ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಿದರು.
ಜನ ಸಾಮಾನ್ಯರಲ್ಲಿ ಆಯುರ್ವೇದ ಮತ್ತು ಆಯುಷ್ ಪದ್ಧತಿಯ ಮಹತ್ವವನ್ನು ತಿಳಿಸಿ ಅರಿವು ಮೂಡಿಸುವ ಉದ್ದೇಶದಿಂದ ಆಯುರ್ವೇದ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ ಎಂದು ಡಾ.ಶೈಲಜಾ ಅವರು ನುಡಿದರು. ಕೊಡಗಿನಾದ್ಯಂತ ಆಯುಷ್ ಪದ್ಧತಿಯನ್ನು ಮನೆ ಮನೆಗೆ ತಲುಪಿಸುವ ಹಾಗೂ ‘ನನ್ನ ಆರೋಗ್ಯ ನನ್ನ ಹಕ್ಕು’ ಎಂಬ ಅಂತರರಾಷ್ಟಿçÃಯ ಆರೋಗ್ಯ ದಿನದ ಘೋಷವಾಕ್ಯದಂತೆ ಕಾರ್ಯ ನಿರ್ವಹಿಸಲು ಶ್ರಮಿಸಲಾಗಿದೆ ಎಂದರು.
ಮೇಕೇರಿ ಸತ್ಯಸಾಯಿ ಮಂದಿರದ ಅಧ್ಯಕ್ಷ ಸೋಮಣ್ಣ ಮಾತನಾಡಿ ಆಯುರ್ವೇದವು ಪುರಾತನ ಕಾಲದ ಔಷಧ ಪದ್ಧತಿಯಾಗಿದ್ದು, ಈ ಪದ್ಧತಿಯನ್ನು ಪ್ರತಿಯೊಬ್ಬರೂ ಅನುಸರಿಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ರೋಹಿಣಿ ಮಾತನಾಡಿ ಆಯುರ್ವೇದ ಮತ್ತು ಆಯುಷ್ ಪದ್ಧತಿಯು ಯಾವುದೇ ಅಡ್ಡ ಪರಿಣಾಮ ಇಲ್ಲದ ಒಂದು ಚಿಕಿತ್ಸಾ ಪದ್ಧತಿಯಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಾರ್ವಜನಿಕರು ಒಲವು ತೋರಿಸಬೇಕೆಂದು ಆಶಯ ವ್ಯಕ್ತಪಡಿಸಿದರು.
ಕುಶಾಲನಗರದ ಯೋಗಕ್ಷೇಮ ಆಸ್ಪತ್ರೆಯ ಡಾ|| ಶ್ಯಾಮ್ ಭಟ್ ಅವರು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಎಂಬ ವಿಷಯ ಕುರಿತು ಮಾತನಾಡಿ ಮಹಿಳೆಯರ ಆರೋಗ್ಯ ಕುಟುಂಬದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆದ್ದರಿಂದ ಕುಟುಂಬದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಕುಟುಂಬದಲ್ಲಿ ಗರ್ಭಿಣಿಯರು, ಬಾಣಂತಿಯರು ಇದ್ದಲ್ಲಿ ಅವರ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಹಿರಿಯ ಮಹಿಳೆಯರು ಆಗಿದ್ದಾರೆ. ಆಯುರ್ವೇದದಲ್ಲಿಯೂ ಸಹ ಇದನ್ನೆ ಹೇಳಲಾಗುತ್ತದೆ ಎಂದರು. ಕೊಡಗು ನೀಮಾ ಸಂಸ್ಥೆಯ ಅಧ್ಯಕ್ಷರಾದ ಡಾ|| ರಾಜಾರಾಂ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಆಯುರ್ವೇದಕ್ಕೆ ಜಾಗತಿಕ ಮಾನ್ಯತೆ ದೊರೆತಿರುವುದು ವಿಶೇಷವಾಗಿದೆ ಎಂದರು.
ಕೊಡಗು ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಇದ್ದರು. ಸುಮಾರು ೧೫೦ ಜನರು ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು. ಉಚಿತ ಆರೋಗ್ಯ ತಪಾಸಣೆ ನಡೆಯಿತು. ಉಪ ಮುಖ್ಯ ವೈದ್ಯಾಧಿಕಾರಿ ಡಾ|| ಶುಭಾ.ಕೆ.ಜಿ. ಪ್ರಾರ್ಥಿಸಿದರು. ಡಾ|| ಸೌಮ್ಯ ನಿರೂಪಿಸಿದರು, ನಿಮಾ ಕೊಡಗು ಸಂಸ್ಥೆಯ ಸದಸ್ಯರಾದ ಡಾ.ರೋಷನ್ ಸ್ವಾಗತಿಸಿದರು.