ಮಡಿಕೇರಿ, ಅ.೨೯ : ಕೊಡಗು ಜಿಲ್ಲಾಡಳಿತ ವತಿಯಿಂದ ೬೯ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್ ೧ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.
ಸಹಕಾರಕ್ಕೆ ಮನವಿ
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಪ್ರಸ್ತುತ ಜಿಲ್ಲೆಯಲ್ಲಿ ಮಳೆ ಇರುವ ಕಾರಣ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ನಗರದ ಕೋಟೆ ಆವರಣದಲ್ಲಿ ನಡೆಸಲಾಗುತ್ತದೆ. ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ.