ಗೋಣಿಕೊಪ್ಪಲು, ಅ. ೨೯: ಗ್ರಾಮೀಣ ಭಾಗದ ಜನತೆಯಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅ.೩೦ (ಇಂದು) ಬೆಳಿಗ್ಗೆ ೧೦ ಗಂಟೆಯಿAದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಬೋಪಣ್ಣ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿನ ನಾಗರಿಕರಿಗೆ ರಕ್ತದಾನದ ಪ್ರಯೋಜನಗಳನ್ನು ತಿಳಿಸುವುದರೊಂದಿಗೆ ರಕ್ತದಾನ ಮಾಡುವುದರಿಂದ ಮತ್ತೊಬ್ಬರಿಗೆ ಸಹಕಾರಿಯಾಗಲಿದೆ ಎಂಬ ಉದ್ದೇಶದೊಂದಿಗೆ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಹಾಗೂ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಡೆಯಲಿದೆ ಎಂದರು.
ಕುಟ್ಟAದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ೨ ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ನುರಿತ ತಜ್ಞ ವೈದ್ಯರ ತಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ೯೪೪೮೪೪೮೪೮೧ ಹಾಗೂ ೮೬೬೦೩೮೦೮೧೦ ಸಂಪರ್ಕಿಸಬಹುದಾಗಿದೆ.