ಮಡಿಕೇರಿ, ಅ. ೨೯: ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಏಕತೆಗಾಗಿ ಓಟವನ್ನು ನಗರದ ಸುದರ್ಶನ ವೃತ್ತದಿಂದ ರಾಜಾಸೀಟ್ ವರೆಗೆ ಹಮ್ಮಿಕೊಳ್ಳಲಾಗಿತ್ತು

ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಶಾಸಕ ಅಪ್ಪಚ್ಚು ರಂಜನ್, ವಿಧಾನಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಕಾಂಗೀರ ಸತೀಶ್, ಮನು ಮಂಜು ನಾಥ್, ವಕ್ತಾರ ಬಿ.ಕೆ. ಅರುಣ್ ಕುಮಾರ್, ಎಸ್‌ಸಿ ಮೋರ್ಚಾ ಜಿಲ್ಲಾದ್ಯಕ್ಷ ಪಿ.ಎಂ. ರವಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಕನ್ನಂಡ ಸಂಪತ್, ನಗರಸಭಾ ಸದಸ್ಯರಾದ ಸವಿತಾ ರಾಕೇಶ್, ಎಸ್.ಸಿ. ಸತೀಶ್, ಸಬಿತಾ, ಶ್ವೇತಾ ಪ್ರಶಾಂತ್, ಚಂದ್ರ, ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.