ವೀರಾಜಪೇಟೆ, ಅ. ೨೯: ಶಿಕ್ಷಣವನ್ನು ಪ್ರತಿಯೊಬ್ಬರು ಯಾವುದೇ ಅಡೆತಡೆಯಿಲ್ಲದೆ ಪಡೆಯುವಂತಾಗಬೇಕು ಎಂದು ವೀರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥ ಹಾಗೂ ಸಮಾಜ ಸೇವಕಿ ಪೂಜಾ ಸಜೇಶ್ ಹೇಳಿದರು. ವೀರಾಜಪೇಟೆ - ಕಲ್ತೊಡು ಕ್ಲಸ್ಟರ್‌ನ ಮುಖ್ಯ ಶಿಕ್ಷಕರ ಸಭೆ ಹಾಗೂ ವಿವಿಧ ಶಾಲೆಗಳ ಮುನ್ನೂರು ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಟ್ರಾö್ಯಕ್ ಸೂಟ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ರಾಜ್ಯದಲ್ಲಿಯೂ ಇತರ ರಾಜ್ಯಗಳಂತೆ ಶಾಲೆಗಳು ಅಭಿವೃದ್ಧಿ ಹೊಂದಬೇಕು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂಬ ತಾರತಮ್ಯ ನಿವಾರಣೆ ಆಗಬೇಕು. ನಲಿ ಕಲಿಯು ಶಾಲಾ ಮಕ್ಕಳಿಗೆ ಉತ್ತಮ ಪ್ರಾಯೋಗಿಕ ಕಾರ್ಯಕ್ರ ಮವಾಗಿದ್ದು, ಮಕ್ಕಳು ಅದರ ಪ್ರಯೋಜನವನ್ನು ಪಡೆಯ ಬೇಕೆಂದರು. ಮಹಿಳಾ ಸಬಲೀಕರಣ ಹಾಗೂ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದ ಅವರು, ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡಬೇಕೆಂದರು. ಸಿ.ಆರ್.ಪಿ. ವೆಂಕಟೇಶ್ ಮಾತನಾಡಿ, ಶಿಕ್ಷಣದ ಸಾರ್ವತ್ರಿಕತೆ ಆಗುತಿದ್ದು ನಲಿ ಕಲಿಯು ಮಕ್ಕಳಿಗೆ ಕಲಿಯಲು ಒಂದು ಉತ್ತಮ ವೇದಿಕೆಯಾಗಿದೆ. ಪ್ರಾಯೋಗಿಕವಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಸಾಧ್ಯ ವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಕ್ಕಪೇಟೆಯ ಸ.ಮಾ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಅಣ್ಣಮ್ಮ ಮಾತನಾಡಿ, ಮಕ್ಕಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಬೇಕು ಎಂದು ಹೇಳಿದರು. ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರವಿ, ಅಕ್ಷರ ದಾಸೋಹ ಅಧಿಕಾರಿ ರಾಜೇಶ್ ಮಾತ ನಾಡಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕರಾದ ಸೀತಾ, ಸುಜಾತ ಹಾಗೂ ಸ.ಕಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಉಪಸ್ಥಿತರಿದ್ದರು. ಈ ಸಂದರ್ಭ ವಿವಿಧ ಶಾಲೆಗಳ ಸಹ ಶಿಕ್ಷಕರು, ಹೆಗ್ಗಳ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.