ಮಡಿಕೇರಿ, ಅ. ೩೦: ಭಾರತ್ ಸ್ಕೌಟ್ಸ್, ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅಧ್ಯಕ್ಷತೆಯಲ್ಲಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಪರಿಸರ ಜಾಗೃತಿ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು, ಪ್ರತಿಯೊಬ್ಬರೂ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.

ದೀಪಾವಳಿ ಸಂದರ್ಭದಲ್ಲಿ ಎಲ್ಲರೂ ‘ಹಣತೆ ಬೆಳಗಿಸಿ, ದೀಪಾವಳಿ ಆಚರಿಸಿ, ಪಟಾಕಿ ತ್ಯಜಿಸಿ - ಮಾಲಿನ್ಯ ತಡೆಯಿರಿ’ ಎಂಬ ಘೋಷಣೆಯಡಿ ಹಸಿರು ದೀಪಾವಳಿ ಹಬ್ಬ ಆಚರಣೆ ಕುರಿತು ಪ್ರತಿಜ್ಞೆ ಸ್ವೀಕರಿಸಲಾಯಿತು. ಸ್ಕೌಟ್ಸ್, ಗೈಡ್ಸ್ನ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ಉಷಾರಾಣಿ, ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು.

ಸ್ಕೌಟ್ಸ್, ಗೈಡ್ಸ್ನ ಜಿಲ್ಲಾ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಉಪಾಧ್ಯಕ್ಷ ಡಿಡಿಪಿಐ ಸಿ. ರಂಗಧಾಮಪ್ಪ, ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಕಾರ್ಯದರ್ಶಿ ಎಂ.ಎA. ವಸಂತಿ, ಸಹ ಕಾರ್ಯದರ್ಶಿ ಗಳಾದ ಬೊಳ್ಳಜಿರ ಅಯ್ಯಪ್ಪ, ಈರಮಂಡ ಹರಿಣಿ ವಿಜಯ್, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಪ್ರಮುಖರಾದ ಕೆ.ಯು. ರಂಜಿತ್, ಅಲೀಮ, ಡೈಸಿ, ಎಂ.ಎಸ್. ಗಣೇಶ್, ಸಿಆರ್‌ಪಿ ಶೃತಿ, ತರಬೇತಿ ಆಯುಕ್ತರು, ಸ್ಥಳೀಯ ಸಂಸ್ಥೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಇದ್ದರು.