ಕುಶಾಲನಗರ, ಅ. ೩೦: ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನ : ೨೦೨೪ರÀಡಿ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಂಬAಧ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಬಳಿಯ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಗುಮ್ಮನಕೊಲ್ಲಿ ಗ್ರಾಮದಲ್ಲಿ ಜಾಥಾ ನಡೆಸಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು.

ಜಾಗೃತಿ ಅಭಿಯಾನಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಚಾಲನೆ ನೀಡಿದರು.

ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾಹಿತಿ ನೀಡಿದರು. ಜಾಗೃತಿ ಜಾಥಾಕ್ಕೆ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಚ್. ಸಾಕಮ್ಮ ಚಾಲನೆ ನೀಡಿದರು.

ಸ್ವಚ್ಛ ಹಾಗೂ ಸ್ವಸ್ಥ ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿಯನ್ನು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ ಬೋಧಿಸಿದರು. ಸಿ ಆರ್ ಪಿ ಟಿ. ಈ.ವಿಶ್ವನಾಥ್, ಪರಿಸರ ಘೋಷಣೆಗಳ ಭಿತ್ತಿ ಫಲಕಗಳನ್ನು ಬಿಡುಗಡೆಗೊಳಿಸಿದರು.

ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್, ಗೈಡ್ಸ್ನ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ವಿ. ಅರುಣ್, ಕೆ.ಆರ್. ರೋಹಿಣಿ, ಎ.ಸಿ. ಶಾಂತಿ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್. ಶಿವಲಿಂಗ, ಸದಸ್ಯ ಎಂ.ಎಸ್. ಕುಮಾರ್, ಲಯನ್ಸ್ ಕ್ಲಬ್‌ನ ವಲಯಾಧಿಕಾರಿ ಸುಮನ್, ಕಾರ್ಯದರ್ಶಿ ನಿತಿನ್, ಖಜಾಂಚಿ ಕಿರಣ್, ಕ್ಲಬ್‌ನ ಮಾಜಿ ಅಧ್ಯಕ್ಷ ಕೊಡಗನ ಹರ್ಷ, ಸದಸ್ಯ ಸತೀಶ್, ಸಮಿತಿ ಸದಸ್ಯರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.