ಪೊನ್ನಂಪೇಟೆ, ಅ. ೩೧: ಇತ್ತೀಚೆಗೆ ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅರ್ವತೊಕ್ಕಲು ಸರ್ವದೈವತಾ ಪ. ಪೂ. ಕಾಲೇಜು ಬಾಲಕರ ತಂಡ ಸತತ ಮೂರನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ. ಅಲ್ಲದೆ ಬಾಲಕಿಯರ ಥ್ರೋಬಾಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕ್ರೀಷ್ಮ ವಿ.ಎ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ದೈಹಿಕ ಶಿಕ್ಷಣ ನಿರ್ದೇಶಕ ಪ್ರಮೋದ್ ಅವರ ಮಾರ್ಗ ದರ್ಶನದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ ಎಂದು ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ ತಿಳಿಸಿದ್ದಾರೆ.