ಕೆನಡಾದಲ್ಲಿ ಹಿಂದೂಗಳ ಮೇಲೆ ಖಲಿಸ್ತಾನಿಗಳ ದಾಳಿ
ಟೊರಾಂಟೊ, ನ. ೪: ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರೌರ್ಯ ಮುಂದುವರೆದಿದ್ದು, ಬ್ರಾಂಪ್ಟನ್‌ನಲ್ಲಿರುವ ದೇವಸ್ಥಾನ ಹಾಗೂ ಅಲ್ಲಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ. ಖಲಿಸ್ತಾನಿಗಳ ಈ ದುಷ್ಕೃತ್ಯದ ವೀಡಿಯೋ ವೈರಲ್ ಆಗಿದ್ದು, ಇದನ್ನು ಜಸ್ಟಿನ್ ಟ್ರುಡೊ ಖಂಡಿಸಿದ್ದಾರೆ. ಈ ಘಟನೆಗೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರೌರ್ಯದ ವೀಡಿಯೋವನ್ನು ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ಈ ವೀಡಿಯೋ ವೈರಲ್ ಆಗಿದೆ. ಇಂದು ಕೆನಡಿಯನ್ ಖಲಿಸ್ತಾನಿಗಳು ತಮ್ಮ ಎಲ್ಲೆ ಮೀರಿದ್ದಾರೆ. ಬ್ರಾಂಪ್ಟನ್‌ನಲ್ಲಿನ ಹಿಂದೂ ಸಭಾ ದೇವಸ್ಥಾನದ ಆವರಣದ ಒಳಗೆ ಹಿಂದೂ ಕೆನಡಿಯನ್ ಭಕ್ತರ ಮೇಲಿನ ಖಲಿಸ್ತಾನಿಗಳ ದಾಳಿಯು ಕೆನಡಾದಲ್ಲಿ ಖಲಿಸ್ತಾನಿ ಹಿಂಸಾ ಉಗ್ರವಾದವು ಎಷ್ಟು ಆಳವಾಗಿದೆ ಹಾಗೂ ಮಿತಿಮೀರಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಕನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಕಾರಿನೊಳಗೆ ಉಸಿರುಗಟ್ಟಿ ನಾಲ್ಕು ಮಕ್ಕಳು ಸಾವು
ಗುಜರಾತ್, ನ. ೪: ಅಮ್ರೇಲಿ ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಕಾರಿನೊಳಗೆ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕೃಷಿ ಕೂಲಿ ಕಾರ್ಮಿಕ ದಂಪತಿಯ ಮಕ್ಕಳು ಬಲಿಯಾಗಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬೆಳಿಗ್ಗೆ ೭.೩೦ರ ಸುಮಾರಿಗೆ ಕಾರು ನಿಲ್ಲಿಸಿ ಭರತ್ ಮಂದಾನಿ ಎಂಬುವÀರ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದರು. ಇದೇ ವೇಳೆ ನಾಲ್ವರು ಮಕ್ಕಳು ತಮ್ಮ ಮನೆ ಬಳಿ ನಿಲ್ಲಿಸಿದ್ದ ತೋಟದ ಮಾಲೀಕರ ಕಾರಿಗೆ ಹತ್ತಿದ್ದಾರೆ. ನಾಲ್ವರು ೨ ರಿಂದ ೭ ವರ್ಷದೊಳಗಿನವರಾಗಿದ್ದು, ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿದೆ. ಕಾರು ನಿಲ್ಲಿಸಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ ಮಕ್ಕಳ ಪೋಷಕರು ಮತ್ತು ಕಾರು ಮಾಲೀಕರು ಹಿಂದಿರುಗಿದಾಗ ಮೃತದೇಹಗಳನ್ನು ಕಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಅಮ್ರೇಲಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ಭೀಕರ ಅಪಘಾತ - ೩೭ ಮಂದಿ ಸಾವು
ಡೆಹ್ರಾಡೂನ್, ನ. ೪: ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ೩೭ ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಬಸ್‌ನಲ್ಲಿ ೪೦ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗರ್ವಾಲ್‌ನಿಂದ ಕುಮೌನ್‌ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗÀಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು. ಘಟನೆಯಲ್ಲಿ ೩೬ ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆಂದು ವರದಿಗಳು ತಿಳಿಸಿವೆ. ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊAಡಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಬಸ್‌ನಿಂದ ಹೊರ ತೆಗೆಯಲಾಗಿದೆ. ಘಟನೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕು ಗೊಳಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಡಿ.ಕೆ.ಶಿ. ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ, ನ. ೪: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಪ್ರಕರಣವನ್ನು ಮುಂದೂಡಿತು. ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯುವ ವಿರುದ್ಧ ಅರ್ಜಿಯನ್ನು ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ಆಗಸ್ಟ್ ೨೯ ರಂದು ನೀಡಿದ ಆದೇಶದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಯನ್ನು ಕೂಡಾ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.
ವಿಚಾರಣೆಗೆ ಹಾಜರಾಗಲು ಸಿದ್ದರಾಮಯ್ಯಗೆ ಸಮನ್ಸ್
ಮೈಸೂರು, ನ. ೪: ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದ ಪ್ರಕರಣದಲ್ಲಿ ತಾ. ೬ ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿನ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ. ಅಂದು ಬೆಳಿಗ್ಗೆ ಮೈಸೂರಿನ ಕಚೇರಿಯಲ್ಲಿ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿದೆ ಎಂದು ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದಾರೆ. ಉಳಿದ ಮೂವರು ಆರೋಪಿಗಳಾದ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ಅವರ ವಿಚಾರಣೆಯು ಈಗಾಗಲೇ ಮುಗಿದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸೂಚನೆಯಂತೆ ಲೋಕಾಯುಕ್ತ ಪೊಲೀಸರು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಡಿಸೆಂಬರ್ ಅಂತ್ಯಕ್ಕೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಬೇಕಿದೆ.
ಬ್ರಿಸ್ಟೇನ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಉದ್ಘಾಟನೆ
ಬ್ರಿಸ್ಟೀನ್, ನ. ೪: ಆಸ್ಟೆçÃಲಿಯಾದ ಬ್ರಿಸ್ಟೇನ್‌ನಲ್ಲಿ ಭಾರತದ ಹೊಸ ರಾಯಭಾರ ಕಚೇರಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಉದ್ಘಾಟಿಸಿದರು. ಇದು ಭಾರತ ಮತ್ತು ಬ್ರಿಸ್ಟೇನ್ ರಾಜ್ಯಗಳ ನಡುವಿನ ಸಂಬAಧವನ್ನು ಬಲಪಡಿಸಲು, ವ್ಯಾಪಾರವನ್ನು ಉತ್ತೇಜಿಸಲು ಮತ್ತು ಅನಿವಾಸಿ ಭಾರತೀಯರಿಗೆ ನೆರವಾಗಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊAಡಿರುವ ಜೈಶಂಕರ್, ಭಾರತೀಯ ಬ್ರಿಸ್ಟೇನ್‌ನಲ್ಲಿ ಉದ್ಘಾಟಿಸಲಾಗಿದೆ. ಇದು ಭಾರತದೊಂದಿಗಿನ ಸಂಬAಧ ಬಲಪಡಿಸುವುದು ಮಾತ್ರವಲ್ಲದೆ ಶಿಕ್ಷಣ ಕ್ರೇತ್ರದಲ್ಲೂ ಮುಂದುವರಿಯಲು ಸಹಾಯಕವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ವಕ್ಫ್ ಬೋರ್ಡ್ ಆಸ್ತಿ ವಿವಾದ - ಅಮಿತ್ ಷಾ, ಸಂಸತ್ ಜಂಟಿ ಸದನ ಸಮಿತಿಗೆ ಪತ್ರ
ಬೆಂಗಳೂರು, ನ. ೪: ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ, ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಸಂಬAಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಂಸತ್ ಜಂಟಿ ಸದನ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದು, ತಕ್ಷಣವೇ ವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರAಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.