ಕೂಡಿಗೆ, ನ. ೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಧದ ಹಾಡಿಯಲ್ಲಿ ಗ್ರಾಮ ಅರಣ್ಯ ಹಕ್ಕು ಸಮಿತಿ ಸಭೆ ಅಧ್ಯಕ್ಷ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಸಭೆಯಲ್ಲಿ ಗಂಧದ ಹಾಡಿಯಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರವನ್ನು ಆರಂಭಿಸುವ ವಿಷಯವಾಗಿ ಜಾಗ ಪರಿಶೀಲನೆ ಸೇರಿದಂತೆ ವಿವಿಧ ಅಭಿವೃದ್ಧಿಗೆ ಸಂಬAಧಿಸಿದAತೆ ಚರ್ಚೆಗಳು ನಡೆದವು.

ಈ ಸಂದರ್ಭದಲ್ಲಿ ಹುದುಗೂರು ಉಪವಲಯ ಅರಣ್ಯಾಧಿಕಾರಿ ಬಿ.ಎಸ್. ಚಂದ್ರಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್ ರವಿ. ರತ್ನಮ್ಮ, ಕೂಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ, ಸೀತಾ ಕಾಲೋನಿ ಹಾಡಿಯ ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಗಂಧದ ಹಾಡಿಯ ಗ್ರಾಮಸ್ಥರು ಹಾಜರಿದ್ದರು.